ಕೊಪ್ಪಳ: ಭತ್ತದ ಬೆಳೆ ನಷ್ಟಕ್ಕೆ ರೈತ ನೇಣಿಗೆ ಶರಣು

ಸಾಲದ ಬಾಧೆ ತಾಳಲಾರದೇ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಕೊಪ್ಪಳ: ಸಾಲದ ಬಾಧೆ ತಾಳಲಾರದೇ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. 

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಚಳ್ಳೂರು ಗ್ರಾಮದಲ್ಲಿ ಹೇಮಂತರಾಜ್ ದೇಸಾಯಿ (40)ಮೃತ ರೈತ. ಬ್ಯಾಂಕ್ ಗಳಲ್ಲಿ ಹಾಗೂ ಕೈಗಡ ಸಾಲ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. 

ಮನೆಯಲ್ಲಿ ಯಾರು ಇಲ್ಲದಾಗ ಹೇಮಂತರಾಜ್ ದೇಸಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಕಾರಟಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com