ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಒಂದೇ ದಿನ 30 ಕೊರೋನಾ ಪ್ರಕರಣ, ಸೋಂಕಿತರ ಸಂಖ್ಯೆ 565ಕ್ಕೆ ಏರಿಕೆ!

ಕೋವಿಡ್-19: ರಾಜ್ಯದಲ್ಲಿ ಒಂದೇ ದಿನ 30 ಕೊರೋನಾ ಪ್ರಕರಣ, ಸೋಂಕಿತರ ಸಂಖ್ಯೆ 565ಕ್ಕೆ ಏರಿಕೆ!
ಸಂಗ್ರಹ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ 30 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 565ಕ್ಕೇರಿಕೆಯಾಗಿದೆ. ಇಲ್ಲಿಯವರೆಗೆ 21 ಜನರು ಮೃತಪಟ್ಟಿದ್ದು, 229 ಮಂದಿ ಗುಣಮುಖರಾಗಿದ್ದಾರೆ.
 
ದಕ್ಷಿಣ ಕನ್ನಡ ಜಿಲ್ಲೆಯ 58 ವರ್ಷದ ಮಹಿಳೆ, ವಿಜಯಪುರದ 62 ವರ್ಷದ ವ್ಯಕ್ತಿ ಮತ್ತು 33 ವರ್ಷದ ಮಹಿಳೆ, ತುಮಕೂರಿನ 65 ವರ್ಷದ ಮಹಿಳೆ, ಬೆಂಗಳೂರು ನಗರದ 20 ಹಾಗೂ 28 ವರ್ಷದ ಯುವಕರು, 63 ವರ್ಷದ ವೃದ್ಧ ಮತ್ತು ದಾವಣಗೆರೆಯ 69 ವರ್ಷದ ವ್ಯಕ್ತಿ ಸೋಂಕಿಗೆ ಗುರಿಯಾಗಿದ್ದಾರೆ. 

ಉಳಿದಂತೆ ಬೆಳಗಾವಿಯ ಹಿರೇಬಾಗೇವಾಡಿಯ 24 ವರ್ಷದ ಇಬ್ಬರು ಮಹಿಳೆಯರು, 27 ವರ್ಷದ ವ್ಯಕ್ತಿ, 18 ವರ್ಷದ ಯುವಕ, 48 ವರ್ಷದ ಮಹಿಳೆ , 50 ವರ್ಷದ ವ್ಯಕ್ತಿ, 27 ವರ್ಷದ ಮಹಿಳೆ, 43, 16, 36 ವರ್ಷದ ವ್ಯಕ್ತಿಗಳು, 8 ವರ್ಷದ ಬಾಲಕ, 36 ವರ್ಷದ ವ್ಯಕ್ತಿ, ಬೆಳಗಾವಿ ಹುಕ್ಕೇರಿಯ 9 ವರ್ಷದ ಬಾಲಕ ಮತ್ತು 75 ವರ್ಷದ ವೃದ್ಧೆಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರದಲ್ಲಿ ಹೊಸದಾಗಿ 9 ಪ್ರಕರಣಗಳು ಪತ್ತೆಯಾಗಿದೆ 15 ವರ್ಷದ ಬಾಲಕ, 60 ವರ್ಷದ ವೃದ್ಧೆ, 4 ವರ್ಷದ ಬಾಲಕಿ, 16 ವರ್ಷದ ಯುವತಿ, 13 ವರ್ಷದ ಬಾಲಕಿ,35 ವರ್ಷದ ವ್ಯಕ್ತಿ,ಮತ್ತು 64 ವರ್ಷದ ವೃದ್ಧೆಯಲ್ಲಿ ಸೋಂಕು ದೃಢಪಟ್ಟಿದೆ. ಕಲಬುರಗಿಯಲ್ಲಿ 35 ವರ್ಷದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ.

ಬೆಂಗಳೂರು ನಗರ 141 ಸೋಂಕಿತರೊಂದಿಗೆ ಮೊದಲನೇ ಸ್ಥಾನದಲ್ಲಿದೆ. ಮೈಸೂರು 88 ಸಂಖ್ಯೆಯೊಂದಿಗೆ ಎರಡು ಹಾಗೂ ಬೆಳಗಾವಿ 67 ಪ್ರಕರಣಗಳೊಂದಿಗೆ 3ನೇ ಸ್ಥಾನದಲ್ಲಿದೆ.ವಿಜಯಪುರ 43 ಹಾಗೂ ಕಲಬುರಗಿಯಲ್ಲಿ 53 ಪ್ರಕರಣಗಳು ಪತ್ತೆಯಾಗಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.