ಕಲಬುರಗಿಯಲ್ಲಿ ಮೇ 7ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ ಶರತ್ ಬಿ

ಕಲಬುರಗಿ: ಸೂರ್ಯ ನಗರಿ ಕಲಬುರಗಿಯಲ್ಲಿ ಕೊರೊನಾ ಅರ್ಧ ಶತಕ ಬಾರಿಸಿದ್ದು, ಜಿಲ್ಲೆಯಾದ್ಯಂತ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿದೆ.
ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಜಾರಿಯಲ್ಲಿರುವ ಸಿ.ಆರ್.ಪಿ.ಸಿ. 1973 ಕಲಂ 144 ರನ್ವಯ ನಿಷೇಧಾಜ್ಞೆಯನ್ನು ಮೇ-7ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.
ಇನ್ನು, ಕೋವಿಡ್ -19 ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮನೆ-ಮನೆಗೆ ಭೇಟಿ ನೀಡಿ ILI/SARI/ತೀವ್ರ ರೀತಿಯ ಆರೋಗ್ಯ ಸಮಸ್ಯೆ ಹೊಂದಿರುವವರ ಪತ್ತೆಗೆ ಸಾರ್ವತ್ರಿಕ ಸಮೀಕ್ಷೆ ನಡೆಯಲಿದೆ. 3 ದಿನದಲ್ಲಿ ಈ ಸಮೀಕ್ಷೆ ಪೂರ್ಣಗೊಳ್ಳಲಿದ್ದು, ಮನೆಗೆ ಬಂದ ಸಿಬ್ಬಂದಿಗಳಿಗೆ ಮಾಹಿತಿ ನೀಡಿ ಸಹಕರಿಸಿ ಎಂದು ಅವರು ಸಾರ್ವಜನಿಕರಲ್ಲಿ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


