ವಿದೇಶದಲ್ಲಿ ಸಿಲುಕಿಕೊಂಡಿರುವ 11 ಸಾವಿರ ಕನ್ನಡಿಗರನ್ನು ತಾಯ್ನಾಡಿಗೆ ಕರೆತರಲು ಸರ್ಕಾರ ತೀರ್ಮಾನ

ಮೇ 3 ರನಂತರ ವಿದೇಶದಲ್ಲಿ ಸಿಲುಕಿ ಹಾಕಿಕೊಂಡಿರುವ ಸುಮಾರು 11 ಸಾವಿರ ಕನ್ನಡಿಗರನ್ನು ಮರಳಿ ತಾಯ್ನಾಡಿಗೆ ಕರೆತರಲು ರಾಜ್ಯ ಸರಕಾರ ತೀರ್ಮಾನ ತೆಗೆದುಕೊಂಡಿದೆ. ಇದರಲ್ಲಿ ವಿದ್ಯಾರ್ಥಿಗಳು, ಪ್ರವಾಸಕ್ಕೆ ಹೋದವರು ಮತ್ತು ಇತರರು ಸೇರಿದ್ದಾರೆ.
ಸುರೇಶ್ ಕುಮಾರ್
ಸುರೇಶ್ ಕುಮಾರ್
Updated on

ಬೆಂಗಳೂರು: ಮೇ 3 ರನಂತರ ವಿದೇಶದಲ್ಲಿ ಸಿಲುಕಿ ಹಾಕಿಕೊಂಡಿರುವ ಸುಮಾರು 11 ಸಾವಿರ ಕನ್ನಡಿಗರನ್ನು ಮರಳಿ ತಾಯ್ನಾಡಿಗೆ ಕರೆತರಲು ರಾಜ್ಯ ಸರಕಾರ ತೀರ್ಮಾನ ತೆಗೆದುಕೊಂಡಿದೆ. ಇದರಲ್ಲಿ ವಿದ್ಯಾರ್ಥಿಗಳು, ಪ್ರವಾಸಕ್ಕೆ ಹೋದವರು ಮತ್ತು ಇತರರು ಸೇರಿದ್ದಾರೆ.

ಹೊರದೇಶಗಳಲ್ಲಿರುವ ಭಾರತೀಯರನ್ನು ಕರೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ವಿದೇಶಗಳಲ್ಲಿ 10,823 ಜನ ಕರ್ನಾಟಕದವರು ಇದ್ದಾರೆ. ಮೊದಲ ಹಂತದಲ್ಲಿ 6,100 ಜನ ವಿದೇಶದಿಂದ ವಾಪಸ್ ಆಗಲಿದ್ದಾರೆ.

ಸೌದಿ ಅರೇಬಿಯ, ಕೆನಡಾ, ಇಂಗ್ಲೆಂಡ್ ಮುಂತಾದ ದೇಶಗಳಲ್ಲಿ ಕನ್ನಡಿಗರಿದ್ದಾರೆ. ಎಲ್ಲರನ್ನು ಕರೆ ತರಲು ಸರ್ಕಾರ ಮುಂದಾಗಿದ್ದು, ವಾಪಸ್ ಬಂದವರನ್ನು ಕ್ವಾರಂಟೈನ್ ನಲ್ಲಿರಿಸಿ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಈ ಪೈಕಿ 4408 ಪ್ರವಾಸಿಗರು, 3074 ವಿದ್ಯಾರ್ಥಿಗಳು, 2284 ವೃತ್ತಿಪರ ಕೆಲಸ ಮಾಡುವವರೂ ಇದ್ದಾರೆ ಎಂದು ಸಚಿವರು ವಿವರಿಸಿದರು. ಪ್ರಧಾನವಾಗಿ ಕೆನಡಾ (328), ಅಮೆರಿಕಾ (927) , ಅರಬ್ ದೇಶಗಳಿಂದ ಹಿಂತಿರುಗುತ್ತಿರುವ ವ್ಯಕ್ತಿಗಳನ್ನು ಏರ್ ಪೋರ್ಟ್ ಗಳಲ್ಲಿ ಸ್ಕ್ರೀನಿಂಗ್ ಮಾಡಿ ಅವರ ದೇಹ ಪರಿಸ್ಥಿತಿಗೆ ಅನುಗುಣವಾಗಿ ಅವರಿಗೆ ಅವಶ್ಯಕ ಶುಶ್ರೂಷೆ
ಒದಗಿಸಲಾಗುವುದು ಎಂದು ತಿಳಿಸಿದರು. ಅದರಂತೆ ಬೇರೆ ಬೇರೆ ರಾಜ್ಯಗಳಲ್ಲಿರುವ ಕನ್ನಡಿಗರನ್ನು ರಾಜ್ಯಕ್ಕೆ ಕರೆಸಿಕೊಳ್ಳಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com