ಕೋವಿಡ್‌ನಿಂದ ಪುತ್ರ ಮೃತಪಟ್ಟ ವಿಷಯ ತಿಳಿದು ಸಾವನ್ನಪ್ಪಿದ ತಾಯಿ

ಪುತ್ರ ಕೋವಿಡ್‌ ಸೋಂಕಿನಿಂದ ಮೃತಪಟ್ಟಿರುವುದು ತಿಳಿಯುತ್ತಿದ್ದಂತೆ ಅವರ ತಾಯಿಯೂ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ರಾಯಚೂರಿನಲ್ಲಿ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ರಾಯಚೂರು: ಪುತ್ರ ಕೋವಿಡ್‌ ಸೋಂಕಿನಿಂದ ಮೃತಪಟ್ಟಿರುವುದು ತಿಳಿಯುತ್ತಿದ್ದಂತೆ ಅವರ ತಾಯಿಯೂ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ರಾಯಚೂರಿನಲ್ಲಿ ನಡೆದಿದೆ. 

ಹೈದರಾಬಾದ್‌ನಲ್ಲಿ ಚಿಕಿತ್ಸೆಪಡೆಯುತ್ತಿದ್ದ ಜಿಲ್ಲೆಯ ಮಾನ್ವಿ ತಾಲ್ಲೂಕು ಉಪನೋಂದಣಾಧಿಕಾರಿ ಶಕೀಲ್‌ ಅಹ್ಮದ್‌ (45 ವರ್ಷ) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ರಾಯಚೂರಿನ ಹಾಜಿ ಕಾಲೋನಿಯಲ್ಲಿದ್ದ ತಾಯಿ ರಜೀಯಾ ಸುಲ್ತಾನ (65 ವರ್ಷ) ಕೂಡಾ ಮೃತಪಟ್ಟಿದ್ದಾರೆ. 

ಬೆಂಗಳೂರಿನಲ್ಲಿ ಉಪನೋಂದಣಾಧಿಕಾರಿಯಾಗಿರುವ ಇವರ ಇನ್ನೋರ್ವ ಪುತ್ರನಿಗೆ ಕೂಡ, ಕೋವಿಡ್‌ ದೃಢಪಟ್ಟಿದ್ದರಿಂದ ಚಿಕಿತ್ಸೆಗಾಗಿ ಹೈದರಾಬಾದ್‌ನಲ್ಲಿಯೇ ದಾಖಲಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com