ಕೊರೋನಾ ಎಫೆಕ್ಟ್: ಕೆಸಿ ಜನರಲ್ ಆಸ್ಪತ್ರೆಯ ಐಸಿಯು ಬೆಡ್ ಗಳ ಸಂಖ್ಯೆ 6 ರಿಂದ 100ಕ್ಕೆ ಏರಿಕೆ

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ನಗರದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವ ಬೆನ್ನಲ್ಲೇ ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 100 ಐಸಿಯು ಹಾಸಿಗೆಗಳಿಗೆ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ.
ಕೆಸಿ ಜನರಲ್ ಆಸ್ಪತ್ರೆ
ಕೆಸಿ ಜನರಲ್ ಆಸ್ಪತ್ರೆ
Updated on

ಬೆಂಗಳೂರು: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ನಗರದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವ ಬೆನ್ನಲ್ಲೇ ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 100 ಐಸಿಯು ಹಾಸಿಗೆಗಳಿಗೆ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ.

ಈ ಹಿಂದೆ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ಹೆಚ್ಚುವರಿಯಾಗಿ 100 ಐಸಿಯು ಹಾಸಿಗೆಗಳಿಗೆ ವ್ಯವಸ್ಥೆ ಮಾಡುವ ಕುರಿತು ಭರವಸೆ ನೀಡಿದ್ದರು. ಪ್ರಸ್ತುತ ಈ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ 4 ಹಾಸಿಗೆಗಳಿದ್ದು ಕೂಡಲೇ ಅವುಗಳ ಸಂಖ್ಯೆಯನ್ನು 100ಕ್ಕೆ ಹೆಚ್ಚಿಸಲಾಗುತ್ತಿದೆ. 

ಈ ಬಗ್ಗೆ ಮಾಹಿತಿ ನೀಡಿರುವ ಕೆಸಿ ಜನರಲ್ ಆಸ್ಪತ್ರೆ ಆಡಳಿತ ಮಂಡಳಿ ಪ್ರಸ್ತುತ ಆಸ್ಪತ್ರೆಯಲ್ಲಿ ಆರು ಬೆಡ್ ಗಳ ಐಸಿಯು ಕೊಠಡಿಯಿದ್ದು ಈ ಸಂಖ್ಯೆಯನ್ನು 100 ಬೆಡ್ ಗಳಿಗೆ ಏರಿಕೆ ಮಾಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಪಕ್ಕದ ಆಸ್ಪತ್ರೆ ಕ್ಯಾಂಪಸ್ ನಲ್ಲಿರುವ ಐಪಿಪಿ ಬಿಲ್ಡಿಂಗ್ ಅನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ. ಇಲ್ಲಿ 50 ಐಸಿಯು  ಬೆಡ್ ಗಳು ಮತ್ತು 50 ಮೊಬೈಲ್ ಐಸಿಯು ಕಂಟೈನರ್ ಗಳನ್ನು ಸಿದ್ಧಪಡಿಸಲಾಗುತ್ತದೆ. ಕಟ್ಟಡದ ಪಾರ್ಕಿಂಗ್ ಪ್ರದೇಶವನ್ನೂ ಕೂಡ ಚಿಕಿತ್ಸೆಗೆ ಬಳಕೆ ಮಾಡಿಕೊಳ್ಳಬಹುದು ಎಂದು ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಬಿ ಆರ್ ವೆಂಕಟೇಶಯ್ಯ ಅವರು ಹೇಳಿದ್ದಾರೆ.

ಅಂತೆಯೇ ಇತ್ತೀಚೆಗೆ ಉಪ ಮುಖ್ಯಮಂತ್ರಿ ಡಾ.ಸಿಎನ್ ಅಶ್ವಥ್ ನಾರಾಯಣ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಆಸ್ಪತ್ರೆಯ ಸವಲತ್ತುಗಳನ್ನು ವೀಕ್ಷಿಸಿ ಇದನ್ನು ಅಪ್ ಗ್ರೇಡ್ ಮಾಡುವ ಕುರಿತು ಭರವಸೆ ನೀಡಿದರು. ಅದರಂತೆ ಐಪಿಪಿ ಕಟ್ಟಡದಲ್ಲಿ ಕಾಮಗಾರಿ ಆರಂಭವಾಗಿದ್ದು, ಆಗಸ್ಟ್ 2ನೇ ವಾರದಲ್ಲಿ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ನಮ್ಮ ಪಾಲಿಗೆ ಇದೊಂದು ದೊಡ್ಡ ಸವಾಲಾಗಿದೆ.  ಐಸಿಯು ಬೆಡ್ ಸವಲತ್ತು ಆರಂಭವಾದರೆ ನಮಗೆ ಹೆಚ್ಚುವರಿ ಸಿಬ್ಬಂದಿಗಳ ಅವಶ್ಯಕತೆ ಬೀಳುತ್ತದೆ. ಈ ಬಗ್ಗೆ ಉಪ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದೇವೆ. ಅಗತ್ಯ ಬಿದ್ದರೆ ಅರಿವಳಿಕೆ ತಜ್ಞರು, ವೈದ್ಯರು, ಶುಶ್ರೂಷಾ ಸಿಬ್ಬಂದಿ, ಗ್ರೂಪ್ ಡಿ ಕಾರ್ಮಿಕರು ಮತ್ತು ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ ಇತರೆ ಹೊಸ ಸಿಬ್ಬಂದಿಗಳನ್ನು ನೇಮಿಸುವ ಭರವಸೆ ನೀಡಿದ್ದಾರೆ. ಈ ಕಾರ್ಯ ಕೂಡ ಪ್ರಗತಿಯಲ್ಲಿ ಎಂದು ವೆಂಕಟೇಶಯ್ಯ ಹೇಳಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com