ಮೈಸೂರು: ಹುಲಿ ಚರ್ಮ ವಶ, ಇಬ್ಬರ ಬಂಧನ

ಅಕ್ರಮವಾಗಿ ಹುಲಿ ಚರ್ಮ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರು: ಹುಲಿ ಚರ್ಮ ವಶ, ಇಬ್ಬರ ಬಂಧನ
Updated on

ಮೈಸೂರು: ಅಕ್ರಮವಾಗಿ ಹುಲಿ ಚರ್ಮ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ವಾಹನವೊಂದರಲ್ಲಿದ್ದ ಸುಮಾರು 3.15 ಮೀಟರ್ ಉದ್ದದ ಹುಲಿ ಚರ್ಮವನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಬಂಧಿತರನ್ನು ಶೀರಂಗಪ್ಟಣ ತಾಲೂಕಿನ ಕೆ ಆರ್ ಎಸ್ ಸಮೀಪದ ಸಂತೇಮಾಳದ ಆಕಾಶ್ ರಾವ್, ವಿಣ್ಣು ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿಯ ಮೇರೆಗೆ, ಕೆಆರ್‌ಎಸ್‌ನಿಂದ ಮೈಸೂರಿಗೆ ಬರುತ್ತಿದ್ದ ಕಾರನ್ನು ಪರಿಶೀಲಿಸಿದಾಗ, ವಾಹನದೊಳಗೆ ಹುಲಿ ಚರ್ಮ ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೋಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com