ಸಿಎಂ ಯಡಿಯೂರಪ್ಪಗೆ ಕೊರೋನಾ ಪಾಸಿಟೀವ್: ಆಸ್ಪತ್ರೆಗೆ ದಾಖಲು! 

ಕೇಂದ್ರ ಗೃಹ ಸಚಿವ ಅಮಿತ್ ಶಾ, ತಮಿಳುನಾಡು ರಾಜ್ಯಪಾಲ ಬನ್ವಾರಿ ಲಾಲ್ ಗೆ ಕೊರೋನಾ ಸೋಂಕು ದೃಢಪಟ್ಟಿರುವ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ. 
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ
Updated on: 

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ, ತಮಿಳುನಾಡು ರಾಜ್ಯಪಾಲ ಬನ್ವಾರಿ ಲಾಲ್ ಗೆ ಕೊರೋನಾ ಸೋಂಕು ದೃಢಪಟ್ಟಿರುವ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ. 

ಖುದ್ದು ಸಿಎಂ ಯಡಿಯೂರಪ್ಪ ಈ ಬಗ್ಗೆ ಟ್ವೀಟ್ ಮಾಡಿದ್ದು, ತಮಗೂ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. 

"ನನಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ಆರೋಗ್ಯವಾಗಿದ್ದೇನೆ, ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ, ನನ್ನೊಂದಿಗೆ ಇತ್ತೀಚಿನ ದಿನಗಳಲ್ಲಿ ಸಂಪರ್ಕದಲ್ಲಿದ್ದವರು ಸ್ವಯಂ ಪ್ರೇರಿತರಾಗಿ ಕ್ವಾರಂಟೈನ್ ಗೆ ಒಳಪಟ್ಟು ಆರೋಗ್ಯದ ಮೇಲೆ ನಿಗಾ ವಹಿಸಬೇಕು" ಎಂದು ಸಿಎಂ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. 

ಇದಕ್ಕೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com