ಬ್ರಾಡ್ ವೇ ಕೋವಿಡ್ ಆಸ್ಪತ್ರೆ 2 ವಾರದೊಳಗೆ ಕಾರ್ಯಾರಂಭ- ಡಾ.ಸುಧಾಕರ್ 

ಶಿವಾಜಿನಗರದ ಬ್ರಾಡ್ ವೇ ಆಸ್ಪತ್ರೆಯನ್ನು 200 ಹಾಸಿಗೆಗಳ ಕೋವಿಡ್ ಆಸ್ಪತ್ರೆಯಾಗಿ ಸಜ್ಜುಗೊಳಿಸಲಾಗುತ್ತಿದೆ. ಇದರ ಸಮರ್ಪಕ ನಿರ್ವಹಣೆಗೆ ಅಗತ್ಯವಿರುವ ವೈದ್ಯರು, ನರ್ಸ್ ಪಾರಾ ಮೆಡಿಕಲ್ ಮತ್ತು ಇತರೆ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು ಇನ್ನು 2 ವಾರದೊಳಗೆ ಕಾರ್ಯಾರಂಭ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಸಚಿವ ಡಾ. ಸುಧಾಕರ್
ಸಚಿವ ಡಾ. ಸುಧಾಕರ್

ಬೆಂಗಳೂರು: ಶಿವಾಜಿನಗರದ ಬ್ರಾಡ್ ವೇ ಆಸ್ಪತ್ರೆಯನ್ನು 200 ಹಾಸಿಗೆಗಳ ಕೋವಿಡ್ ಆಸ್ಪತ್ರೆಯಾಗಿ ಸಜ್ಜುಗೊಳಿಸಲಾಗುತ್ತಿದೆ. ಇದರ ಸಮರ್ಪಕ ನಿರ್ವಹಣೆಗೆ ಅಗತ್ಯವಿರುವ ವೈದ್ಯರು, ನರ್ಸ್ ಪಾರಾ ಮೆಡಿಕಲ್ ಮತ್ತು ಇತರೆ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು ಇನ್ನು 2 ವಾರದೊಳಗೆ ಕಾರ್ಯಾರಂಭ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಬ್ರಾಡ್ ವೇ ಆಸ್ಪತ್ರೆಯನ್ನು ಸುಸಜ್ಜಿತ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲು ಅಗತ್ಯ ಮೂಲಸೌಕರ್ಯ ಒದಗಿಸಲು ನೆರವು ನೀಡಿರುವ  ಸುಧಾಮೂರ್ತಿ ಮತ್ತು ಇನ್ಫೋಸಿಸ್ ಪ್ರತಿಷ್ಠಾನಕ್ಕೆ ಸರ್ಕಾರ ಮತ್ತು ಜನತೆಯ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಡಾ. ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಮುಂದಾಗಿರುವ ಹಾವೇರಿ ಜಿಲ್ಲೆಯ 570 ಖಾಸಗಿ ವೈದ್ಯರು ಇಡೀ ಸಮಾಜಕ್ಕೆ ಮಾದರಿಯಾಗಿದ್ದಾರೆ. ಕೊರೋನಾದಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಯಾವುದೇ ಪ್ರತಿಫಲ ಅಪೇಕ್ಷಿಸದೆ ನಿಸ್ವಾರ್ಥ ಸೇವೆ ಸಲ್ಲಿಸುವ ಮೂಲಕ ಮಾನವೀಯತೆ ಮೆರೆದಿರುವ ಈ ವೈದ್ಯರ ವೃತ್ತಿಪರತೆ ಮತ್ತು  ಸೇವಾ ಮನೋಭಾವ ಆತ್ಯಂತ ಶ್ಲಾಘನೀಯ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com