ರಾಜ್ಯದಲ್ಲಿ ಇಂದು ಕೊರೋನಾಗೆ 98 ಬಲಿ, ಬೆಂಗಳೂರಿನಲ್ಲಿ 1497 ಸೇರಿ 4752 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 98 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2594ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 98 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2594ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 27 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 98 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1497 ಹೊಸ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 4752 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,39, 571ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ಚೇತರಿಕೆ ಪ್ರಮಾಣವೂ ಉತ್ತಮವಾಗಿದ್ದು, ಕಳೆದ 24 ಗಂಟೆಗಳಲ್ಲಿ 4776 ಮಂದಿ ಸೋಂಕಿನಿಂದ ಗುಣಮುಖರಾಗಿ, ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಗುಣಮುಖರಾದವರ ಸಂಖ್ಯೆ 62,500ಕ್ಕೆ ಏರಿಕೆಯಾಗಿದೆ. 

ರಾಜ್ಯದಲ್ಲಿ ಒಟ್ಟು 74469 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 629 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com