ಸಿಎಂ ಯಡಿಯೂರಪ್ಪ ಬಳಿಕ ಅವರ ಪುತ್ರಿಯಲ್ಲೂ ಕೊರೋನಾ ವೈರಸ್ ದೃಢ!

ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಕೊರೋನಾ ದೃಢಪಟ್ಟ ಬೆನ್ನಲ್ಲೇ ಅವರ ಪುತ್ರಿಯೊಬ್ಬರಲ್ಲೂ ಕೊರೋನಾ ಪಾಸಿಟಿವ್ ಬಂದಿದೆ ಎಂದು ಮೂಲಗಳಿಂದ ಸೋಮವಾರ ತಿಳಿದುಬಂದಿದೆ.
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ
Updated on: 

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಕೊರೋನಾ ದೃಢಪಟ್ಟ ಬೆನ್ನಲ್ಲೇ ಅವರ ಪುತ್ರಿಯೊಬ್ಬರಲ್ಲೂ ಕೊರೋನಾ ಪಾಸಿಟಿವ್ ಬಂದಿದೆ ಎಂದು ಮೂಲಗಳಿಂದ ಸೋಮವಾರ ತಿಳಿದುಬಂದಿದೆ. 

ನಿನ್ನೆಯಷ್ಟೇ ಯಡಿಯೂರಪ್ಪ ಅವರಲ್ಲಿ ಕೊರೋನಾ ಪಾಸಿಟಿವ್ ಬಂದಿತ್ತು. ಇದೀಗ ಅವರ ಪುತ್ರಿಯಲ್ಲೂ ಕೊರೋನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಇವರನ್ನೂ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. 

ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಹಗಲು ರಾತ್ರಿ ಶ್ರಮಿಸುತ್ತಿದ್ದ ಯಡಿಯೂರಪ್ಪ ಅವರು ಪ್ರತಿನಿತ್ಯ ಅನೇಕ ಸಚಿವರು, ಅಧಿಕಾರಿಗಳು, ವೈದ್ಯರು, ಖಾಸಗಿ ಆಶ್ಪತ್ರೆಗಳು ಸೇರಿದಂತೆ ಇತರೆ ಪ್ರಮುಖರೊಂದಿಗೆ ಸಭೆಗಳಲ್ಲಿ ಭಾಗವಹಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿ ವಾರವೂ ಅವರಿಗೆ ಕೊರೋನಾ ಪರೀಕ್ಷೆ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಅವರಿಗೆ ಪಾಸಿಟಿವ್ ವರದಿ ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com