ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ನಾಯಕರ ಕುರಿತು ಅವಹೇಳನಕಾರಿ ಹೇಳಿಕೆ ಬೇಡ: ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಮನವಿ

ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ನಾಯಕರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಮನವಿ ಮಾಡಿಕೊಂಡಿದ್ದಾರೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್
Updated on

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ನಾಯಕರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಮನವಿ ಮಾಡಿಕೊಂಡಿದ್ದಾರೆ. 

ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ರಾಜಕೀಯ ನಾಯಕರ ಆರೋಗ್ಯ ಹಾಗೂ ಇತರೆ ವಿಚಾರಗಳ ಕುರಿತು ಸಾಮಾಜಿಕ ಜಾಲತಾಣದಂತಹ ವೇದಿಕೆಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡದಿರಿ. ಇತರರಿಗೆ ಕೆಟ್ಟದ್ದು ಬಯಸುವ ಸಂಸ್ಕೃತಿ ನಮ್ಮದಲ್ಲ. ನಮ್ಮ ಪಕ್ಷ ಸಹೋದರತ್ವ ಹಾಗೂ ಮಾನವೀಯತೆಗೆ ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ. 

ಈ ನಡುವೆ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಲ್ಲೂ ಕೊರೋನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಶೀಘ್ರಗತಿಯಲ್ಲಿ ಗುಣಮುಖರಾಗಲೆಂದು ಹಾರೈಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com