ಬೆಂಗಳೂರು: ಕರ್ನಾಟಕದಲ್ಲಿ ಇಂದು 5,619 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,51,449ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು 100 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 2,804ಕ್ಕೆ ಏರಿಕೆಯಾಗಿದೆ.
ಒಟ್ಟಾರೆ 1,51,449 ಕೊರೋನಾ ಪ್ರಕರಣಗಳ ಪೈಕಿ 74,679 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 73,958 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇನ್ನು ರಾಜ್ಯಾದ್ಯಂತ ಸುಮಾರು 633 ಮಂದಿ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ನಗರದಲ್ಲಿ 29 ಮಂದಿ ಮೃತಪಟ್ಟಿದ್ದು, ಇಲ್ಲಿ ಒಟ್ಟು ಸೋಂಕಿಗೆ ಬಲಿಯಾದವರ ಸಂಖ್ಯೆ 1163ಕ್ಕೆ ಏರಿಕೆಯಾಗಿದೆ. ಮೈಸೂರಿನಲ್ಲಿ 11, ದಕ್ಷಿಣ ಕನ್ನಡದಲ್ಲಿ 10, ಶಿವಮೊಗ್ಗದಲ್ಲಿ ಆರು ಮಂದಿ ಸಾವಿಗೀಡಾಗಿದ್ದಾರೆ.
Advertisement