8 ಐಪಿಎಸ್ ಅಧಿಕಾರಿಗಳ ಟ್ರಾನ್ಸ್ ಫರ್; ಡಿವೈಎಸ್‌ಪಿಗಳಿಗೆ ಮುಂಬಡ್ತಿ ನೀಡಿ ವರ್ಗಾವಣೆ

ಪೊಲೀಸ್ ಇಲಾಖೆಯಲ್ಲಿ ಡಿವೈಎಸ್‌ಪಿ (ಸಿವಿಲ್) ವೃಂದದಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳಿಗೆ ಎಸ್‌.ಪಿ. (ಸಿವಿಲ್, ನಾನ್ ಐಪಿಎಸ್) ವೃಂದಕ್ಕೆ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಡಿವೈಎಸ್‌ಪಿ (ಸಿವಿಲ್) ವೃಂದದಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳಿಗೆ ಎಸ್‌.ಪಿ. (ಸಿವಿಲ್, ನಾನ್ ಐಪಿಎಸ್) ವೃಂದಕ್ಕೆ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ.

ಎಸ್‌.ಟಿ.ಸಿದ್ದಲಿಂಗಪ್ಪ ಅವರನ್ನು ರಾಜ್ಯ ಗುಪ್ತವಾರ್ತೆ ಪೊಲೀಸ್ ಅಧೀಕ್ಷಕರಾಗಿ, ಮುಹಮ್ಮದ್ ಹುಸೇನ್ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ, ಬಸಪ್ಪ ಎಸ್.ಅಂಗಡಿ ಅವರನ್ನು ಬೆಂಗಳೂರು ನಗರ ಅಪರಾಧ-2ರ ಉಪ ಪೊಲೀಸ್ ಆಯುಕ್ತರಾಗಿ ವರ್ಗಾಯಿಸಲಾಗಿದೆ.

ಬಿ.ಎಲ್.ವೇಣುಗೋಪಾಲ್ ಅವರನ್ನು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ, ಗುರುನಾಥ್ ಬಿ.ಮತ್ತೂರು ಅವರನ್ನು ಬಳ್ಳಾರಿ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧೀಕ್ಷಕರಾಗಿ,ಸಿ.ಎನ್.ಭೋಪಯ್ಯ ಅವರನ್ನು ಮಂಗಳೂರು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧೀಕ್ಷಕರಾಗಿ , ಎಂ.ಮಂಜುನಾಥ್ ಅವರನ್ನು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ವರ್ಗಾಯಿಸಲಾಗಿದೆ.

ಅಂತೆಯೇ ಬೆಂಗಳೂರು ಉತ್ತರ ಸಂಚಾರ ವಿಭಾಗದ ಡಿಸಿಪಿ ಸಾರಾ ಫಾತಿಮಾ ಸೇರಿದಂತೆ 8 ಐಪಿಎಸ್ ಅಧಿಕಾರಿಗಳನ್ನು ಶುಕ್ರವಾರ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಿಡಿಸಿದೆ. ಉಳಿದಂತೆ ಮಂಗಳೂರಿನ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಆಗಿದ್ದ ಲಕ್ಷ್ಮೀ ಗಣೇಶ್ ಅವರನ್ನು ಬೆಂ.ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸ್ಥಾನಕ್ಕೆ ವರ್ಗಾಯಿಸಲಾಗಿದೆ. ಅದೇ ರೀತಿ, ವಿ.ಜೆ.ಸಜೀತ್ ಅವರನ್ನು ಬೆಂಗಳೂರು ಉತ್ತರ ಸಂಚಾರ ವಿಭಾಗದ ಡಿಸಿಪಿ ಆಗಿ, ಸಾರಾ ಫಾತಿಮಾ ಅವರನ್ನು ಸಿಐಡಿ ಎಸ್ಪಿ, ಯಶೋಧಾ ವಂಟಗೋಡಿ ಅವರನ್ನು ಕರ್ನಾಟಕ ಲೋಕಾಯುಕ್ತ ಎಸ್ಪಿ, ಜಯಪ್ರಕಾಶ್ ಅವರನ್ನು ಎಸಿಪಿ ಎಸ್ಪಿ ಆಗಿ ವರ್ಗಾವಣೆ ಮಾಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com