ಹಳೆ ವೈಷಮ್ಯ ಹಿನ್ನೆಲೆ: ಕೊಲೆ ಆರೋಪಿಯ ಬರ್ಬರ ಹತ್ಯೆ

ಜೈಲಿನಿಂದ ಜಾಮೀನಿನ ಮೇಲೆ ಹೊರಬಂದು ಆಟೋ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದ ಹಳೆ ಕೊಲೆ ಆರೋಪಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಿನ್ನೆ ತಡರಾತ್ರಿ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ಜೈಲಿನಿಂದ ಜಾಮೀನಿನ ಮೇಲೆ ಹೊರಬಂದು ಆಟೋ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದ ಹಳೆ ಕೊಲೆ ಆರೋಪಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಿನ್ನೆ ತಡರಾತ್ರಿ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬ್ಯಾಟರಾಯನಪುರದ ಶಾಮಣ್ಣ ಗಾರ್ಡನ್‌ನ ಹಿರಾ ಮಸೀದಿ ಬಳಿ ನಿವಾಸಿ ಇಸ್ಲಾಂ ಖಾನ್ (36) ಕೊಲೆಗೀಡಾದ ವ್ಯಕ್ತಿ.  ನಿನ್ನೆ ರಾತ್ರಿ ಇಸ್ಲಾಂ ಖಾನ್ ಹಿರಾ ಮಸೀದಿ ಬಳಿ ನಿಂತಿದ್ದಾಗ ದುಷ್ಕರ್ಮಿಗಳ ತಂಡವೊಂದು  ಮಾರಕಾಸ್ತ್ರಗಳಿಂದ ಆತನ ಮೇಲೆ ದಾಳಿ ನಡೆಸಿದೆ. 

ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಸ್ಥಳೀಯರು ತಕ್ಷಣ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com