ಕುಸಿಯುತ್ತಿದೆ ಕೊರೋನಾ ಸೋಂಕು: ಕರ್ನಾಟಕದಲ್ಲಿಂದು 4,267 ಸೋಂಕು ಪತ್ತೆ, 114 ಬಲಿ!

ಬೆಂಗಳೂರು: ದಿನ ಕಳೆದಂತೆ ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ. ಹೌದು ರಾಜ್ಯದಲ್ಲಿಂದು 4,267 ಪ್ರಕರಣಗಳು ಪತ್ತೆಯಾಗಿದ್ದು 114 ಮಂದಿ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 4,267 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,82,354ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು 114 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 3,312ಕ್ಕೆ ಏರಿಕೆಯಾಗಿದೆ.
ಒಟ್ಟಾರೆ 1,82,354 ಕೊರೋನಾ ಪ್ರಕರಣಗಳ ಪೈಕಿ 99,126 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 80,908 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು 1,243 ಮಂದಿ ಕೊರೋನಾಗೆ ತುತ್ತಾಗಿದ್ದಾರೆ. ಇನ್ನು 36 ಮಂದಿ ಇಂದು ಮೃತಪಟ್ಟಿದ್ದು ಒಟ್ಟಾರೆ 1,276 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಒಟ್ಟಾರೆ 75,428 ಸೋಂಕಿತರ ಪೈಕಿ 41,166 ಮಂದಿ ಗುಣಮುಖರಾಗಿದ್ದಾರೆ. ಇನ್ನು 32,985 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


