ಆಂತರಿಕ ಭದ್ರತಾ ಪೊಲೀಸ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲು: ಭಾಸ್ಕರ್ ರಾವ್

ಚಾಲನೆ ದೊರೆತ ಏಳು ವರ್ಷಗಳ ನಂತರ ಪ್ರಪ್ರಥಮ ಬಾರಿಗೆ ಆಂತರಿಕ ಭದ್ರತಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದಕ್ಕೆ ಭಾಸ್ಕರ್ ರಾವ್ ಸಂತಸ ವ್ಯಕ್ತಪಡಿಸಿದ್ದಾರೆ.
ಭಾಸ್ಕರ್ ರಾವ್
ಭಾಸ್ಕರ್ ರಾವ್
Updated on: 

ಬೆಂಗಳೂರು: ಚಾಲನೆ ದೊರೆತ ಏಳು ವರ್ಷಗಳ ನಂತರ ಪ್ರಪ್ರಥಮ ಬಾರಿಗೆ ಆಂತರಿಕ ಭದ್ರತಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದಕ್ಕೆ ಭಾಸ್ಕರ್ ರಾವ್ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಭಾಸ್ಕರ್ ರಾವ್, 2013ರಲ್ಲಿ ಠಾಣೆ ಮಾಡಲಾಗಿತ್ತಾದರೂ ಇದುವರೆಗೂ ಅದು ಸಕ್ರಿಯವಾಗಿರಲಿಲ್ಲ. ಆ. 5 ರಂದು ಮಾದಕ ವಸ್ತು ಕಾಯ್ದೆಯಡಿ ಮೊದಲ ಪ್ರಕರಣ ದಾಖಲಾಗಿದ್ದು, ಓರ್ವನನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ. 

ಈ ಕುರಿತು ಗೃಹ ಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಡಿಜಿಪಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಬರೆದುಕೊಳ್ಳುವ ಮೂಲಕ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com