ಡಿಜೆ ಹಳ್ಳಿ ಗಲಭೆ ಪ್ರಕರಣ ಜಿಲ್ಲಾ ಮ್ಯಾಜಿಸ್ಟ್ರೇಟ್ ರಿಂದ ತನಿಖೆಗೆ ಮುಖ್ಯಮಂತ್ರಿ ನೇತೃತ್ವದ ಸಭೆ ತೀರ್ಮಾನ: ಬಸವರಾಜ್ ಬೊಮ್ಮಾಯಿ

ಡಿಜೆ ಹಳ್ಳಿ ಗಲಭೆ ಪ್ರಕರಣವನ್ನು ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ತನಿಖೆಗೆ ವಹಿಸಲು ನಿರ್ಧಾರವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Updated on

ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣವನ್ನು ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ತನಿಖೆಗೆ ವಹಿಸಲು ನಿರ್ಧಾರವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವ ಸದಾನಂದಗೌಡ, ಆರ್.ಅಶೋಕ್, ಡಿಜಿಪಿ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಭಾಗಿಯಾಗಿದ್ದರು, ಯಾವ ರೀತಿ ತನಿಖೆ ನಡೆಸಬೇಕು ಎಂದು ಮಹತ್ವದ ಚರ್ಚೆ ನಡೆಸಲಾಯಿತು.

ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಹಾಗು ಡಿವಿ ಸದಾನಂದಗೌಡ ಜೊತೆ ಸಭೆ ಸಿಎಂ ಸಭೆ ನಡೆಸಿ ಪರಿಸ್ಥಿತಿ ಅವಲೋಕನ ಮಾಡಿದರು, ಎಲ್ಲಾ ಆಯಾಮದಲ್ಲಿ ಚರ್ಚಿಸಲಾಯಿತು, ಇಡಿ ಪ್ರಕರಣ, ಬೆಂಕಿ ಹಾಕಿದ್ದು ಪುಂಡಾಟ ಮಾಡಿದ್ದು ಎಲ್ಲವನ್ನೂ ಚರ್ಚಿಸಿ, ಅಂತಿಮವಾಗಿ ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ನೇತೃತ್ವದ ತನಿಖೆ ನಡೆಸಲು ನಿರ್ಧಾರ ಕೈಗೊಳ್ಳಲಾಯಿತು ಎಂದರು. 

ಇಂತಹ ಘಟನೆಗಳು ನಡೆದ ಸಂದರ್ಭದಲ್ಲಿ ಯಾವ ರೀತಿ ತನಿಖೆ ನಡೆಸಬೇಕು ಬೆನ್ನು ಕುರಿತು ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಮಾರ್ಗಸೂಚಿ ರಚಿಸಿದ್ದು, ಕಾನೂನು ರೀತಿಯಲ್ಲಿಯೇ ತನಿಖೆ ಆಗಲಿ ಎನ್ನುವ ಕಾರಣಕ್ಕೆ ನಾವು ಮಾನವ ಹಕ್ಕು ಆಯೋಗದ ಮಾರ್ಗಸೂಚಿಯಂತೆ ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ನೇತೃತ್ವದ ತನಿಖೆಗೆ ವಹಿಸಲು ನಿರ್ಧರಿಸಲಾಯಿತು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com