ನಾನು ಹುಟ್ಟಿ ಬೆಳೆದ ಮನೆ ಸಂಪೂರ್ಣ ಭಸ್ಮ, ಅಂದಾಜು 3 ಕೋಟಿ ರೂ. ನಷ್ಟ: 'ಕೈ' ಶಾಸಕ ಅಖಂಡ ಶ್ರೀನಿವಾಸ ಮೂರ್ತಿ
ಬೆಂಗಳೂರು: ನನ್ನ ಪಾಡಿಗೆ ನಾನಿದ್ದೆ, ಯಾರ ಮೇಲೂ ದ್ವೇಷ ಸಾಧಿಸಿಲ್ಲ. ಆದರೂ ನನ್ನ ಮನೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ನಾನು ಹುಟ್ಟಿ ಬೆಳೆದ ಮನೆ ಸಂಪೂರ್ಣ ಭಸ್ಮವಾಗಿದೆ ಬರೋಬ್ಬರಿ 3 ಕೋಟಿ ರುಪಾಯಿ ನಷ್ಟವಾಗಿದೆ ಎಂದು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹೇಳಿದ್ದಾರೆ.
ನನ್ನ ಕ್ಷೇತ್ರದಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರೈಸ್ತರು ಎಲ್ಲಾ ಧರ್ಮದವರು ಒಟ್ಟಾಗಿ ಇದ್ದೇವೆ. ಆದರೂ ನನ್ನನ್ನು ಟಾರ್ಗೆಟ್ ಮಾಡಲಾಗಿದೆ. ಈ ಕೃತ್ಯ ಎಸಗಿದವರನ್ನು ಪತ್ತೆ ಮಾಡಿ ನ್ಯಾಯ ಒದಗಿಸಬೇಕು ಎಂದು ದೂರನ್ನು ಕೊಟ್ಟಿದ್ದೇವೆ. ಈ ಗಲಭೆಯಿಂದ ಏನೇನು ನಷ್ಟ ಆಗಿದೆ ಎಂದು ಒಂದು ಪಟ್ಟಿ ಮಾಡಿಕೊಡುತ್ತೇನೆ ಎಂದರು.
ನನ್ನ ಕ್ಷೇತ್ರವನ್ನು ಬಿಟ್ಟು ಹೊರಗೆ ಹೋಗಿಲ್ಲ. ಅಲ್ಲದೇ ನಾವು ಯಾರ ಮೇಲೂ ದ್ವೇಷಕ್ಕೆ ಹೋಗಿಲ್ಲ. ನಮ್ಮ ಕ್ಷೇತ್ರದಲ್ಲಿ 24 ವರ್ಷದಿಂದ ಇಂತಹ ಘಟನೆಗಳು ನಡೆದಿರಲಿಲ್ಲ ಎಂದರು.
ನನ್ನ ಮನೆಯ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಹೀಗಾಗಿ ಅವರೆಲ್ಲರಿಗೂ ಪ್ರತ್ಯೇಕ ದೂರು ಕೊಡಲು ತಿಳಿಸಲಾಗಿದೆ. ನಾನು ಪ್ರತ್ಯೇಕವಾಗಿ ದೂರು ಕೊಡುತ್ತೇನೆ. ಮನೆ, ಮನೆಯಲ್ಲಿದ್ದ ವಸ್ತು, ದಾಖಲಾತಿ ಎಲ್ಲವೂ ಹಾಳಾಗಿದೆ. ಒಟ್ಟು ಸುಮಾರು ಮೂರು ಕೋಟಿಯಷ್ಟು ನಷ್ಟವಾಗಿದೆ ಎಂದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ