ಕೊರೊನಾ ಸೋಂಕಿತರಲ್ಲದ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಿದರೆ ಕಠಿಣ ಕ್ರಮ: ವೈದ್ಯರಿಗೆ ಕೆಎಂಸಿ ಎಚ್ಚರಿಕೆ

ಕೊರೋನಾ ವೈರಸ್ ಸೋಂಕಿತಿರಲ್ಲದ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕರ್ನಾಟಕ ವೈದ್ಯಕೀಯ ಪರಿಷತ್ತು ಎಚ್ಚರಿಕೆ ನೀಡಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಕೊರೋನಾ ವೈರಸ್ ಸೋಂಕಿತಿರಲ್ಲದ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕರ್ನಾಟಕ ವೈದ್ಯಕೀಯ ಪರಿಷತ್ತು ಎಚ್ಚರಿಕೆ ನೀಡಿದೆ.

ತುಮಕುರು ಮೂಲದ ವಕೀಲ ರಮೇಶ್ ಎಲ್ ನಾಯಕ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿನಗಿ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಮಾಹಿತಿ ನೀಡಿದೆ ಕೆಎಂಸಿ (ಕರ್ನಾಟಕ ವೈದ್ಯಕೀಯ ಪರಿಷತ್ತು) ಕೊರೊನಾ ಸೋಂಕಿತರಲ್ಲದ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ. ವೈದ್ಯಕೀಯ ನೀತಿ ಸಂಹಿತೆ 2002ರ 2.1 ಮತ್ತು .2ರ ಅಡಿಯಲ್ಲಿ ದಂಡ ಹಾಕಲಾಗುತ್ತದೆ ಎಂದು  ಹೇಳಿದೆ.

ಅಲ್ಲದೆ ಈ ಸಂಬಂಧ ಸಂತ್ರಸ್ಥರು ದೂರು ದಾಖಲಿಸಲು ಸಹಾಯವಾಣಿ ಕೂಡ ತೆರೆಯಲಾಗಿದ್ದು, 9916302328 ಮತ್ತು 080-22200888 ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಸಂತ್ರಸ್ಥರೋಗಿಗಳು ಅಥವಾ ಸಂಬಂಧಿಕರು ದೂರು ಸಲ್ಲಿಕೆ ಮಾಡಬಹುದು ಎಂದು ಕೆಎಂಸಿ ಸ್ಪಷ್ಟನೆ ನೀಡಿದೆ. 

ಇದೇ ವೇಳೆ ಅರ್ಜಿದಾರರು  ಸಲ್ಲಿಕೆ ಮಾಡಿರುವ ಅರ್ಜಿಯಲ್ಲಿ ಕೊರೋನಾ ಭಯದಿಂದಾಗಿ ಕೆಲ ಕ್ಲಿನಿಕ್ ಗಳು ಮತ್ತು ಆಸ್ಪತ್ರೆಗಳು ಬಾಗಿಲು ಮುಚ್ಚಿದ್ದು, ಇದೂ ಕೂಡ ವೈದ್ಯಕೀಯ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ ಎಂದು ಹೇಳಿದ್ದಾರೆ. 

ಈ ಹಿಂದಿನ ವಿಚಾರಣೆಯಲ್ಲಿ ‘ಚಿಕಿತ್ಸೆ ನಿರಾಕರಿಸುವ ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಲಾಗಿದೆ’ ಎಂದು ವೈದ್ಯಕೀಯ ಪರಿಷತ್ತಿನ ಪರ ವಕೀಲರು ತಿಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com