ಕಿಸಾನ್ ಸಮ್ಮಾನ್‌ ಯೋಜನೆಯಡಿ 50 ಲಕ್ಷ ರೈತರಿಗೆ 1 ಸಾವಿರ ಕೋಟಿ‌ ರೂ. ಬಿಡುಗಡೆ: ಕೃಷಿ ಸಚಿವ ಬಿಸಿ ಪಾಟೀಲ್

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 1 ಸಾವಿರ ಕೋಟಿ ರೂ.ಗಳನ್ನು 50 ಲಕ್ಷ ರೈತರಿಗೆ ಬಿಡುಗಡೆಯಾಗಿದ್ದು, ಕಳೆದ ಶನಿವಾರದಿಂದ ರೈತರ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತಿದೆ ಎಂದು ಕೃಷಿ ಸಚಿವ  ಬಿಸಿ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಬಿಸಿ ಪಾಟೀಲ್
ಬಿಸಿ ಪಾಟೀಲ್
Updated on

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 1 ಸಾವಿರ ಕೋಟಿ ರೂ.ಗಳನ್ನು 50 ಲಕ್ಷ ರೈತರಿಗೆ ಬಿಡುಗಡೆಯಾಗಿದ್ದು, ಕಳೆದ ಶನಿವಾರದಿಂದ ರೈತರ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತಿದೆ ಎಂದು ಕೃಷಿ ಸಚಿವ  ಬಿಸಿ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಫೇಸ್‌ಬುಕ್ ಲೈವ್‌ನಲ್ಲಿ ರಾಜ್ಯದ ರೈತ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಸಚಿವರು,ರೈತ ಬಾಂಧವರು ತಮ್ಮ ಖಾತೆಯನ್ನು ಪರಿಶೀಲಿಸಬೇಕೆಂದು ಮನವಿ ಮಾಡಿದ್ದಾರೆ.

2019-20ನೇ ಸಾಲಿನ ಬೆಳೆ ವಿಮೆ ಬರುವ ಮಂಗಳವಾರದಿಂದ ರೈತರ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದ್ದು, ವಿಮೆಗಾಗಿ ರೈತರು ಯಾವುದೇ ಕಾರಣಕ್ಕೂ ಆತಂಕಕ್ಕೊಳಗಾಗುವುದಾಗಲೀ ಚಿಂತಿಸುವ ಅವಶ್ಯಕತೆಯಿಲ್ಲ. ಸರ್ಕಾರ ಮತ್ತು ಇಲಾಖೆ ಎಂದಿಗೂ ರೈತರೊಂದಿಗೆ ಸದಾ ಬೆನ್ನೆಲುಬಾಗಿ ನಿಲ್ಲಲಿದೆ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com