ಡಿಜೆ ಹಳ್ಳಿ ಗಲಭೆ ಪ್ರಕರಣ: ಜೈಲಿನಲ್ಲೇ ಕ್ವಾರಂಟೈನ್ ನಲ್ಲಿದ್ದಾರೆ ಗಲಭೆಕೋರರು

ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಯುವಕನರ್ನು ಬೆಂಗಳೂರು ಕೇಂದ್ರೀಯ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಕ್ವಾರಂಟೈನ್'ಗೊಳಪಡಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಯುವಕನರ್ನು ಬೆಂಗಳೂರು ಕೇಂದ್ರೀಯ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಕ್ವಾರಂಟೈನ್'ಗೊಳಪಡಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಗಲಭೆಕೋರರನ್ನು ಜೈಲಿನಲ್ಲಿ ಪ್ರತ್ಯೇಕವಾಗಿರಿಸಲಾಗಿದ್ದು, ಕೊರೋನಾ ಸೋಂಕು ನಿಯಂತ್ರಿಸುವ ಸಲುವಾಗಿ ಇತರೆ ಕೈದಿಗಳೊಂದಿಗೆ ಸಂಪರ್ಕಿಸದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. 

ಕಾರಾಗೃಹಕ್ಕೆ ಬರುವ ಹೊಸ ಕೈದಿಗಳಿಗಾಗಿ ಪ್ರತ್ಯೇಕ ಸ್ಥಳವನ್ನು ಮೀಸಲಿರಿಸಲಾಗಿದ್ದು, ಕೈದಿಗಳನ್ನು ಈ ಪ್ರದೇಶದಲ್ಲಿ 14 ದಿನಗಳ ಕಾಲ ಪ್ರತ್ಯೇಕವಾಗಿರಿಸಲಾಗುತ್ತದೆ. ಪ್ರಕರಣ ಸಂಬಂಧ 148 ಮಂದಿ ಬಂಧನಕ್ಕೊಳಗಾಗಿದ್ದು, ಎಲ್ಲರನ್ನೂ 14 ದಿನಗಳ ಕಾಲ ಪ್ರತ್ಯೇಕವಾಗಿಸಲಾಗುತ್ತದೆ ಎಂದು ಜೈಲಿನ ಅಧಿಕಾರಿಗಳು ಹೇಳಿದ್ದಾರೆ. 

ಬಂಧನಕ್ಕೊಳಗಾಗಿದ್ದ 24 ವರ್ಷದ ಯುವಕನೊಬ್ಬನಲ್ಲಿ ಈ ಹಿಂದೆ ವೈರಸ್ ಇರುವುದು ದೃಢಪಟ್ಟಿತ್ತು. ಕೂಡಲೇ ಆದನನ್ನು ಕಳೆದ ಗುರುವಾರ ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅತೀವ್ರ ಉಸಿರಾಟ ಸಮಸ್ಯೆ ಎದುರಿಸುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದ.

ಕಾರಾಗೃಹಕ್ಕೆ ಕರೆತಂದ ಸಂದರ್ಭದಲ್ಲಿ ಯುವಕನನ್ನು ಪ್ರತ್ಯೇಕವಾಗಿರಿಸಲಾಗಿತ್ತು. ಪ್ರಕರಣ ಸಂಬಂಧ ಈವರೆಗೂ ಐವರು ಆರೋಪಿಗಳಲ್ಲಿ ವೈರಸ್ ದೃಢಪಟ್ಟಿದೆ ಎಂದು ಸಿಸಿಬಿ ಪೊಲೀಸು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com