ಡಾ. ಸಿ.ಎನ್. ಅಶ್ವತ್ಥ ನಾರಾಯಣ
ಡಾ. ಸಿ.ಎನ್. ಅಶ್ವತ್ಥ ನಾರಾಯಣ

ರಾಷ್ಟ್ರೀಯ ಶಿಕ್ಷಣ ನೀತಿ ಗುರಿ ತಲುಪಲು 'ಟಾರ್ಗೆಟ್ 2030': ಡಾ. ಸಿ.ಎನ್. ಅಶ್ವತ್ಥ ನಾರಾಯಣ

ಬರುವ 2030ರ ವೇಳೆಗೆ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ನಿಗದಿ ಮಾಡಲಾಗಿರುವ ಎಲ್ಲ ಗುರಿಗಳನ್ನು ಸಂಪೂರ್ಣವಾಗಿ ಸಾಧಿಸಲು ಹೆಜ್ಜೆ ಇಟ್ಟಿರುವ ರಾಜ್ಯ ಸರಕಾರ, ಮುಂದಿನ ಮೂರು ವರ್ಷಗಳಲ್ಲಿ 6 ಸಂಶೋಧನೆ ಮತ್ತು 10 ಬೋಧನಾ ಕೇಂದ್ರಿತ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಜತೆಗೆ 34 ಸ್ವಾಯತ್ತ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಉದ್ದೇಶಿಸಿದೆ.

ಬೆಂಗಳೂರು: ಬರುವ 2030ರ ವೇಳೆಗೆ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ನಿಗದಿ ಮಾಡಲಾಗಿರುವ ಎಲ್ಲ ಗುರಿಗಳನ್ನು ಸಂಪೂರ್ಣವಾಗಿ ಸಾಧಿಸಲು ಹೆಜ್ಜೆ ಇಟ್ಟಿರುವ ರಾಜ್ಯ ಸರಕಾರ, ಮುಂದಿನ ಮೂರು ವರ್ಷಗಳಲ್ಲಿ 6 ಸಂಶೋಧನೆ ಮತ್ತು 10 ಬೋಧನಾ ಕೇಂದ್ರಿತ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಜತೆಗೆ 34 ಸ್ವಾಯತ್ತ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಉದ್ದೇಶಿಸಿದೆ.

ನಗರದಲ್ಲಿಂದು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಕುರಿತು ರಚಿಸಲಾಗಿರುವ ಕಾರ್ಯಪಡೆಯ ಜತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮತ್ತಿತರ ಜತೆ ಮಹತ್ವದ ಮಾತುಕತೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಇಲಾಖೆ ಜವಾಬ್ದಾರಿ ಹೊಂದಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ʼಹೊಸದಾಗಿ ಆರಂಭವಾಗುವ ಈ ಸಂಸ್ಥೆಗಳ ಮೂಲಕ ಪ್ರತಿ ಜಿಲ್ಲೆಯಲ್ಲೂ ಗುಣಮಟ್ಟದ ಶಿಕ್ಷಣ, ಬೋಧನೆ ಹಾಗೂ ಸಂಶೋಧನೆಗೆ ಪೂರಕವಾದ ಮುಕ್ತ ಅವಕಾಶ ಕಲ್ಪಿಸಲಾಗುವುದುʼ ಎಂದರು.

ಮುಂದಿನ ನಾಲ್ಕೈದು ದಿನಗಳಲ್ಲಿ ಸರ್ಕಾರದಿಂಧ ರಚಿಸಲಾಗಿರುವ ಕಾರ್ಯಪಡೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಬಗ್ಗೆ ಒಂದು ಕರಡು ಪ್ರತಿಯನ್ನು ಸರಕಾರಕ್ಕೆ ನೀಡಲಿದೆ. ಈ ತಿಂಗಳ 29ರೊಳಗೆ ಸಮಗ್ರ ನೀತಿ ಜಾರಿ ಬಗ್ಗೆ ಪರಿಪೂರ್ಣ ನೀಲನಕ್ಷೆ (ರೋಡ್ಮ್ಯಾಪ್) ಯನ್ನು ಸಲ್ಲಿಸಲಿದೆ. ಸಮಾಜದ ಎಲ್ಲ ಸಮಸ್ಯೆಗಳಿಗೂ ಶಿಕ್ಷಣವೇ ಸಂಜೀವಿನಿ ಎಂಬುದು ಸರಕಾರದ ಬಲವಾದ ನಂಬಿಕೆಯಾಗಿದ್ದು, ಈ ನಿಟ್ಟಿನಲ್ಲಿ ಪ್ರಾಥಮಿಕ, ಪ್ರೌಢ ಮತ್ತು ಉನ್ನತ ಶಿಕ್ಷಣದ ಎಲ್ಲ ಹಂತಗಳಲ್ಲಿಯೂ ಏನೆಲ್ಲ ಬದಲಾವಣೆ ತರಬೇಕು ಎಂಬುದನ್ನು ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಆಮೂಲಾಗ್ರವಾಗಿ ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ಕಾರ್ಯಪಡೆ ಜತೆ ಮಹತ್ವದ ಸಮಾಲೋಚನೆ ನಡೆಸಿ ಮುಂದಿನ ಕಾರ್ಯಕ್ರಮಗಳ ದಿಕ್ಸೂಚಿಯನ್ನು ಅಂತಿಮಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಮಾಹಿತಿ ನೀಡಿದರು.

ರಾಷ್ಟ್ರೀಯ ಶಿಕ್ಷಣ ನೀತಿಯ ಎಲ್ಲಾ ಗುರಿಗಳನ್ನು ತಲುಪಲು 10 ವರ್ಷಗಳ ಗುರಿ ಹೊಂದಲಾಗಿದ್ದು, ಟಾರ್ಗೆಟ್-2030 ಎಂದು ಪರಿಗಣಿಸಿದ್ದೇವೆ. ರಾಷ್ಟ್ರೀಯ ಶಿಕ್ಷಣ ನೀತಿ ನಿಗದಿ ಮಾಡಿಲುವ ಎಲ್ಲಾ ಗುರಿಗಳನ್ನು ಮುಂದಿನ 10 ವರ್ಷಗಳಲ್ಲಿ ಸಾಧಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೆಜ್ಜೆಯನ್ನಿಟ್ಟಿದೆ. ಮುಂದಿನ ಮೂರು ವರ್ಷಗಳಲ್ಲಿ 6 ಸಂಶೋಧನಾ ಕೇಂದ್ರಿತ ವಿಶ್ವವಿದ್ಯಾಲಯ, 10 ಬೋಧನಾ ಕೇಂದ್ರಿತ ವಿಶ್ವವಿದ್ಯಾಲಯ ಹಾಗೂ 34 ಸ್ವಾಯತ್ತ ಶಿಕ್ಷಣ ಸಂಸ್ಥೆಗಳನ್ನು ತೆರೆಯಲಿದೆ. ಹೊಸದಾಗಿ ಆರಂಭವಾಗಲಿರುವ ಈ ಸಂಸ್ಥೆಗಳ ಮೂಲಕ ಪ್ರತಿ ಜಿಲ್ಲೆಗಳಲ್ಲಿಯೂ ಗುಣಮಟ್ಟದ ಶಿಕ್ಷಣ, ಬೋಧನೆ ಮತ್ತು ಸಂಶೋಧನೆಗೆ ಪೂರಕವಾದ ಮುಕ್ತ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು. 

Related Stories

No stories found.

Advertisement

X
Kannada Prabha
www.kannadaprabha.com