ಕೊರೋನಾ ಸೋಂಕು ನಿಯಂತ್ರಣಕ್ಕೆ ಬೂತ್‌ ಮಟ್ಟದಲ್ಲಿ ಸ್ವಯಂ ಸೇವಕರ ನೇಮಕ: ಬಿಬಿಎಂಪಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬೂತ್‌ ಮಟ್ಟದಲ್ಲಿ ಸ್ವಯಂ ಸೇವಕರ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಹೇಳಿದೆ.
ಆಂಧ್ರ ಪ್ರದೇಶದಲ್ಲಿ ಕೊರೋನಾ ಆರ್ಭಟ
ಆಂಧ್ರ ಪ್ರದೇಶದಲ್ಲಿ ಕೊರೋನಾ ಆರ್ಭಟ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬೂತ್‌ ಮಟ್ಟದಲ್ಲಿ ಸ್ವಯಂ ಸೇವಕರ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಹೇಳಿದೆ.

ಶುಕ್ರವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸ್ವಯಂ ಸೇವಕರ ನೋಂದಣಿಗೆ (ಬಿಎಲ್‌- ಕೇರ್ಸ್‌) ವೆಬ್‌ಸೈಟ್‌ ಲೋಕಾರ್ಪಣೆಗೊಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು, ನಗರದಲ್ಲಿ ಕೋವಿಡ್‌-19 ಸೋಂಕು ನಿಯಂತ್ರಣ ಕಾರ್ಯಗಳಿಗೆ ಅಧಿಕಾರಿಗಳನ್ನು ನೇಮಕಮಾಡಲಾಗಿದೆ. ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರ ಪಡೆಯಲಾಗಿದೆ. ಇದೀಗ ಸ್ಥಳೀಯವಾಗಿ ಲಭ್ಯವಿರುವ ಅಧಿಕಾರಿಗಳು ಹಾಗೂ ಸ್ವಯಂ ಸೇವಕರನ್ನು ಬಳಸಿ ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಅಂತೆಯೇ ನಗರದಲ್ಲಿ ಬೂತ್‌ ಮಟ್ಟದಲ್ಲಿ ಕೊರೋನಾ ಸೋಂಕು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸ್ವಯಂ ಸೇವಕರಾಗಿ ಮನೆಗಳಿಗೆ ತೆರಳಿ ಆರೋಗ್ಯ ಸಮೀಕ್ಷೆ ಮಾಡಲು ಇಚ್ಛಿಸುವ ಯುವಕರು ನೋಂದಣಿ ಮಾಡಿಕೊಳ್ಳುವಂತೆ ಕೋರಿದರು. ಬೂತ್‌ ಮಟ್ಟದ ತಂಡದಲ್ಲಿ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಬಯಸುವವರು ವೆಬ್‌ಸೈಟ್‌ಗೆ ಭೇಟಿ ಅರ್ಜಿ ಸಲ್ಲಿಸಬಹುದು ಅಥವಾ ನೋಂದಣಿ ಅರ್ಜಿ ಡೌನ್ಲೋಡ್‌ ಮಾಡಿಕೊಂಡು ಭರ್ತಿ ಮಾಡಿ ಸ್ಥಳೀಯ ಪಾಲಿಕೆ ಕಚೇರಿಗೆ ಸಲ್ಲಿಸಿ ಸ್ವಯಂ ಸೇವಕರಾಗಬಹುದು. 

ವಲಯಗಳಲ್ಲಿ ಸಮೀಕ್ಷೆ ಚುರುಕು 
ಬಿಬಿಎಂಪಿಯ ಪೂರ್ವ ವಲಯದಲ್ಲಿ ಇರುವ 1,438 ಬೂತ್‌ಗಳ ಪೈಕಿ 1,156 ಬೂತ್‌ಗಳಲ್ಲಿ ಸಮೀಕ್ಷೆ ನಡೆಯುತ್ತಿದೆ. ಶೇ.80ರಷ್ಟುಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ಮುಂದಿನ ದಿನಗಳಲ್ಲಿ ಉಳಿದ ವಲಯಗಳಲ್ಲಿ ಕಾರ್ಯ ಚುರುಕುಗೊಳಿಸಲು ನಿರ್ಧರಿಸಲಾಗಿದೆ. ಪ್ರಮುಖ ಅಪಾರ್ಟ್‌ಮೆಂಟ್‌ಗಳಲ್ಲಿ ಅಲ್ಲಿನ ನಿವಾಸಿಗಳೇ ಸ್ವಯಂ ಸೇವಕರಾಗಿ ಸಮೀಕ್ಷೆ ನಡೆಸಿ ಮಾಹಿತಿ ನೀಡುವ ಭರವಸೆ ನೀಡಿದ್ದಾರೆ ಎಂದು ಆಯುಕ್ತ ಮುಂಜುನಾಥ ಪ್ರಸಾದ್‌ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com