ಕೆಆರ್'ಎಸ್ ಜಲಾಶಯ ಭರ್ತಿ: ಪ್ರವಾಹದ ಭೀತಿ ನಡುವಲ್ಲೂ ಆ.21ಕ್ಕೆ ಕಾವೇರಿಗೆ ಸಿಎಂ ಬಾಗಿನ ಅರ್ಪಣೆ

ಭಾರಿ ಮಳೆಯಿಂದಾಗಿ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ಪ್ರವಾಹ ಭೀತಿ ಶುರುವಾಗಿದೆ. ಈ ನಡುವಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗೌರಿ ಹಬ್ಬದ ದಿನದಂದು ಕಾವೇರಿ ತಾಯಿಗೆ ಬಾಗಿನ ಅರ್ಪಿಸಲಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಂಡ್ಯ: ಭಾರಿ ಮಳೆಯಿಂದಾಗಿ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ಪ್ರವಾಹ ಭೀತಿ ಶುರುವಾಗಿದೆ. ಈ ನಡುವಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗೌರಿ ಹಬ್ಬದ ದಿನದಂದು ಕಾವೇರಿ ತಾಯಿಗೆ ಬಾಗಿನ ಅರ್ಪಿಸಲಿದ್ದಾರೆ. 

ಈಗಾಗಲೇ 4 ಬಾರಿ ಕಾವೇರಿ ತಾಯಿಗೆ ಬಾಗಿನ ಅರ್ಪಿಸಿರುವ ಯಡಿಯೂರಪ್ಪ ಅವರು 5ನೇ ಬಾರಿ ಬಾಗಿನ ಅರ್ಪಿಸಿದ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. 

2018ರ ಆಗಸ್ಟ್ ತಿಂಗಳಿನಲ್ಲಿ ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸುವ ಮೂಲಕ ಹೆಚ್ಚಿನ ಬಾರಿ ಬಾಗಿನ ಅರ್ಪಿಸಿದ ಕೀರ್ತಿಗೆ ಯಡಿಯೂರಪ್ಪ ಪಾತ್ರರಾಗಿದ್ದಾರೆ. 

ಕಳೆದ ವರ್ಷ ಆಗಸ್ಟ್ 21ರಂದು ಕೆಆರ್ಎಸ್ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದ್ದರು. ಕಾಕತಾಳೀಯವೆಂಬಂತೆ ಈ ವರ್ಷ ಕೂಡ ಕೆಆರ್ಎಸ್ ಜಲಾಶಯ ಆಗಸ್ಟ್ ತಿಂಗಳಿನಲ್ಲಿ ಪುನಃ ಭರ್ತಿಯಾಗಿರುವುದರಿಂದ ಮುಖ್ಯಮಂತ್ರಿಗಳು ಆಗಸ್ಟ್ 21 ರಂದು ಬಾಗಿನ ಅರ್ಪಿಸುತ್ತಿರುವುದು ಜನರಲ್ಲಿ ಸಂತಸ ಮೂಡಿಸಿದೆ. 

ಈ ನಡುವೆ ಕೊಡಗಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕಾವೇರಿ ನದಿ ಉಕ್ಕಿ ಹರಿದ ಪರಿಣಾಮ 124.8 ಅಡಿ ಗರಿಷ್ಠ ಮಟ್ಟವಿರುವ ಕೆಆರ್'ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯಕ್ಕೆ 9,568 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 5,318 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. 

ಬಾಗಿನ ಅರ್ಪಿಸುವ ಕಾರ್ಯಕ್ರಮದ ವೇಳೆ ಮುಖ್ಯಮಂತ್ರಿಗಳೊಂದಿಗೆ ಜಲಸಂಪನ್ಮೂಲ ಸಚಿವ ಜಾರಿಕಿಹೊಳಿ ಕೂಡ ಭಾಗಿಯಾಗಲಿದ್ದಾರೆ. 

ಸಂಪ್ರದಾಯ ಕುರಿತು ಮಾಹಿತಿ ನೀಡಿರುವ ನಿವೃತ್ತ ಮುಖ್ಯ ಎಂಜಿನಿಯರ್ ಮತ್ತು ಕರ್ನಾಟಕದ ನದಿ ನೀರು ವಿವಾದಗಳ ಕುರಿತ ರಾಜ್ಯ ಸಲಹೆಗಾರ ಶ್ರೀರಾಮಯ್ಯ, “ಬಾಗಿನಾವನ್ನು ನಾವು‘ ಥ್ಯಾಂಕ್ಸ್ ಗಿವಿಂಗ್ ’ಎಂದು ಕರೆಯುತ್ತೇವೆ, ಜಲಾಶಯ ಭರ್ತಿಯಾದ ಕೂಡಲೇ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದಕ್ಕಾಗಿ ದೇವರಿಗೆ ಧನ್ಯವಾದಗಳನ್ನು ಅರ್ಪಿಸುವುದು ಈ ಸಂಪ್ರದಾಯವಾಗಿದೆ. ಸಾಮಾನ್ಯವಾಗಿ, ಉತ್ತಮ ಮಳೆ ಎಂದರೆ ಉತ್ತಮ ಬೆಳೆ ಬಂದಿದೆ ಎಂದರ್ಥ. ಹೀಗಾಗಿ ಜಲಾಶಯ ತುಂಬುತ್ತಿದ್ದಂತೆಯೇ ಮುಖ್ಯಮಂತ್ರಿಗಳು ನೈಸರ್ಗಿಕ ಸಂಪನ್ಮೂಲಗಳ ಸಮೃದ್ಧ ಪೂರೈಕೆ ಮಾಡಿದ್ದಕ್ಕೆ ಬಾಗಿನ ಅರ್ಪಿಸುವ ಮೂಲಕ ದೇವರಿಗೆ ಧನ್ಯವಾದ ಹೇಳುತ್ತಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com