ಹಿರಿಯ ಅಧಿಕಾರಿಗಳ ಕಿರುಕುಳದಿಂದ ತಾಲೂಕ್ ಆರೋಗ್ಯಾಧಿಕಾರಿ ಆತ್ಮಹತ್ಯೆ: ಕುಟುಂಬಸ್ಥರ ಆರೋಪ 

ಹಿರಿಯ ಅಧಿಕಾರಿಗಳ ಕಿರುಕುಳ ತಾಳಲಾರದೆ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ತಾಲೂಕ್ ಆರೋಗ್ಯಾಧಿಕಾರಿ ನಾಗೇಂದ್ರ
ತಾಲೂಕ್ ಆರೋಗ್ಯಾಧಿಕಾರಿ ನಾಗೇಂದ್ರ
Updated on

ಮೈಸೂರು:ಹಿರಿಯ ಅಧಿಕಾರಿಗಳ ಕಿರುಕುಳ ತಾಳಲಾರದೆ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.ಕೆಲಸದ ಒತ್ತಡ ಹಾಗೂ ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕೋವಿಡ್-19 ಸಂದರ್ಭದಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದರೂ ಜಿ.ಪಂ. ಸಿಇಓ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ನನ್ನನ್ನು ಪ್ರಭಾರ ಆರೋಗ್ಯಾಧಿಕಾರಿ ಹುದ್ದೆಯಿಂದ ಮುಕ್ತಿಗೊಳಿಸಿ ಎಂದು ಹಲವು ಬಾರಿ ಡಿಎಚ್‍ಓ ಅವರಿಗೆ ಪತ್ರ ಬರೆದಿದ್ದರು. ಒತ್ತಡದಿಂದ ಕೆಲಸ ಮಾಡಲು ಆಗುತ್ತಿಲ್ಲ ಎಂದು ಕುಟುಂಬಸ್ಥರ ಬಳಿ ಹೇಳಿಕೊಂಡಿದ್ದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com