ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಮಾತೃ ವಿಯೋಗ

ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ (95) ಬುಧವಾರ ತಡರಾತ್ರಿ ವಯೋಸಹಜ ಕಾರಣದಿಂದ ನಿಧನರಾದರು.
ತಾಯಿಯೊಡನೆ ಸಚಿವ ಶ್ರೀರಾಮುಲು
ತಾಯಿಯೊಡನೆ ಸಚಿವ ಶ್ರೀರಾಮುಲು
Updated on: 

ಬಳ್ಳಾರಿ: ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ (೯೫) ಬುಧವಾರ ತಡರಾತ್ರಿ ವಯೋಸಹಜ ಕಾರಣದಿಂದ ನಿಧನರಾದರು.

ಇತ್ತೀಚೆಗೆ ಕೋವಿಡ್ ಸೋಂಕಿಗೆ ಒಳಗಾಗಿದ್ದಅವರು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾದ ಬಳಿಕ ಬಳ್ಲಾರಿಯ ತಮ್ಮ ನಿವಾಸಕ್ಕೆ ತೆರಳಿದ್ದರು.

ತಾಯಿಯ ನಿಧನದ ಬಗೆಗೆ ಸಚಿವ ಶ್ರೀರಾಮುಕು ಟ್ವೀಟ್ ಮಾಡಿದ್ದು "ನನ್ನ ತಾಯಿಯವರಾದ ಹೊನ್ನೂರಮ್ಮ ಅವರು ನಿನ್ನೆ ತಡ ರಾತ್ರಿ ವಯೋಸಹಜ ಕಾರಣದಿಂದ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇನೆ.

"ತೊಂಬತ್ತೈದು ವರ್ಷಗಳ ತುಂಬು ಜೀವನ ನಡೆಸಿದ್ದ ಅಮ್ಮ, ಇತ್ತೀಚೆಗಷ್ಟೇ ಕೋವಿಡ್ ಸೋಂಕಿಗೆ ತುತ್ತಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖರಾಗಿ ಬಳ್ಳಾರಿಯ ಮನೆಗೆ ಹಿಂದಿರುಗಿದ್ದರು." ಎಂದಿದ್ದಾರೆ.

ಕೋವಿಡ್ ಕಾರಣದಿಂದ ಅಂತ್ಯ ಸಸ್ಕಾರಕ್ಕೆ ಹೆಚ್ಚು ಜನ ಸೇರುವಂತಿಲ್ಲದ ಕಾರಣ ಕುಟುಂಬ ಸದಸ್ಯರು, ಆಪ್ತರ ಸಮ್ಮುಖದಲ್ಲಿ ಇಂದು ಬೆಳಗಿನ ಜಾವ ಅಂತ್ಯ ಸಂಸ್ಕಾರ ನೆರವೇರಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com