ಕರ್ನಾಟಕದಲ್ಲಿ ಕೊರೋನಾ ಮರಣಮೃದಂಗ: ಇಂದು ದಾಖಲೆಯ 148 ಬಲಿ, 8,161 ಮಂದಿಗೆ ಪಾಸಿಟಿವ್!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಒಂದೇ ದಿನ ದಾಖಲೆಯ 148 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,958ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಕೊರೋನಾ 8,161 ಮಂದಿ ತುತ್ತಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,91,826ಕ್ಕೇರಿಕೆಯಾಗಿದೆ. ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇನ್ನು 2,91,826 ಪ್ರಕರಣಗಳ ಪೈಕಿ 2,04,439 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ಧಾರೆ. 82, 410 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ 61 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 148 ಮಂದಿ ಸಾವನ್ನಪ್ಪಿದ್ದು ಸಾವಿನ ಸಂಖ್ಯೆ 4,958ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2,294 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 1,12,087ಕ್ಕೆ ಏರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


