ಬೆಂಗಳೂರು ಗಲಭೆ:  ಎನ್‌ಐಎಗೆ ತನಿಖೆ ವರ್ಗಾವಣೆ ಕುರಿತು ಅರ್ಜಿ,ರಾಜ್ಯಸರ್ಕಾರಕ್ಕೆ  ಹೈಕೋರ್ಟ್ ನೋಟೀಸ್

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗಳಲ್ಲಿ  ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧಗಳ ಕಾಯ್ದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ನಿಬಂಧನೆಗಳನ್ನು ಹೇರಲು ನಿರ್ದೇಶನಗಳನ್ನು ಕೋರಿದ  ಅರ್ಜಿ ಸಂಬಂಧ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. 
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗಳಲ್ಲಿ  ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧಗಳ ಕಾಯ್ದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ನಿಬಂಧನೆಗಳನ್ನು ಹೇರಲು ನಿರ್ದೇಶನಗಳನ್ನು ಕೋರಿದ  ಅರ್ಜಿ ಸಂಬಂಧ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. 

ಆ. 11 ರಾತ್ರಿ ನಗರದ ಡಿಜೆ ಹಳ್ಳಿ, ಕೆಜಿ ಹಳ್ಳಿ ಠಣೆ ವ್ಯಾಪ್ತಿಯಲ್ಲಿ ನಡೆದ ಗಲಭೆಯ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರಲ್ಲಿ, ಅರ್ಜಿದಾರರು ರಾಜ್ಯ ಪೊಲೀಸರು ನಡೆಸುವ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾಯಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನಗಳನ್ನು ಕೋರಿದ್ದಾರೆ.

ಒಂದು ಗುಂಪಿನ ಅರ್ಜಿಗಳನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಅಶೋಕ ಎಸ್.ಕಿಣಿಗಿ ಅವರನ್ನೊಳಗೊಂಡ ವಿಭಾಗೀಯ ಪೀಠವು ರಾಜ್ಯ ಸರ್ಕಾರ ಮತ್ತು ಇತರ ಪ್ರತಿವಾದಿಗಳಿಗೆ ನೋಟಿಸ್ ನೀಡಿದೆ.

ಇದೇ ವೇಳೆ ಡಿಜೆ ಹಳ್ಳಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹಾನಿಗಳನ್ನು ನಿರ್ಣಯಿಸಲು, ಹೊಣೆಗಾರಿಕೆಯನ್ನು ಸರಿದೂಗಿಸಲು ಮತ್ತು ಪರಿಹಾರ ಮೊತ್ತವನ್ನು ಪಡೆಯಲು ಪರಿಹಾರಕ್ಕಾಗಿನ ಯುಕ್ತರನ್ನು( claims commissioner) ನೇಮಿಸಲು ನಿರ್ದೇಶನಗಳನ್ನು ಕೋರಿ ಮನವಿಗಳ ಮೇಲೆ ಶುಕ್ರವಾರ ಆದೇಶಗಳನ್ನು ರವಾನಿಸುವುದಾಗಿ ನ್ಯಾಯಪೀಠ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com