ಅತಿವೃಷ್ಠಿ: ಹೆಚ್ಚಿನ ಪರಿಹಾರ ಕೋರಲು ಮುಂದಿನ ವಾರ ದೆಹಲಿಗೆ-ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

 ರಾಜ್ಯದಲ್ಲಿನ ಅತಿವೃಷ್ಠಿ ಹಿನ್ನೆಲೆಯಲ್ಲಿ ಮುಂದಿನ ವಾರ‌ ದೆಹಲಿಗೆ ಹೋಗಿ ಹೆಚ್ವಿನ ಪರಿಹಾರ  ಬಿಡುಗಡೆಗೆ ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ
ಬೆಳಗಾವಿಯಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ

ಬೆಳಗಾವಿ: ರಾಜ್ಯದಲ್ಲಿನ ಅತಿವೃಷ್ಠಿ ಹಿನ್ನೆಲೆಯಲ್ಲಿ ಮುಂದಿನ ವಾರ‌ ದೆಹಲಿಗೆ ಹೋಗಿ ಹೆಚ್ವಿನ ಪರಿಹಾರ  ಬಿಡುಗಡೆಗೆ ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ತಿಳಿಸಿದ್ದಾರೆ.

ಅತಿವೃಷ್ಟಿಗೆ  ಸಂಬಂಧಿಸಿದಂತೆ ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ನಡೆದ ಧಾರವಾಡ  ಮತ್ತು ಬೆಳಗಾವಿ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ಶೀಘ್ರ ಎಲ್ಲ ಶಾಸಕರ ಸಭೆ ಕರೆದು ಅತಿವೃಷ್ಟಿಯಿಂದ ಆಗಿರುವ  ಹಾನಿಗೆ ಸಮರ್ಪಕ ಪರಿಹಾರ ನೀಡಲು ಯೋಜನೆ ರೂಪಿಸಲಾಗುವುದು. ಎಲ್ಲ ಮಾಹಿತಿಯನ್ನು ಕೇಂದ್ರ  ಸರ್ಕಾರಕ್ಕೆ ಕಳಿಸಲಾಗುವುದು ಎಂದರು.

ಶಾಸಕರು ತಮ್ಮ  ತಮ್ಮ ಕ್ಷೇತ್ರದಲ್ಲಿ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಕೋವಿಡ್-19 ಇರುವುದರಿಂದ ಎನ್.ಡಿ‌.ಆರ್.ಎಫ್. ಅನುದಾನದಡಿ ತುರ್ತು ಅಗತ್ಯವಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ತಿಳಿಸಿದರು.

ಬೆಳಗಾವಿ ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಯಡಿಯೂರಪ್ಪ, ಪ್ರವಾಹ ನಿರ್ವಹಣೆ ಮತ್ತಿತರ ತುರ್ತು ಕೆಲಸಕ್ಕೆ ಬೆಳಗಾವಿ ಜಿಲ್ಲೆಯಲ್ಲಿ 412 ಕೋಟಿ ರೂಪಾಯಿ ಅನುದಾನ ಲಭ್ಯವಿದೆ. ಹೆಚ್ಚಿನ ಹಣ ಬೇಕಾದರೆ ತಕ್ಷಣವೇ ಬಿಡುಗಡೆ ಮಾಡಲಾಗುವುದು. ಜಿಲ್ಲೆಯಲ್ಲಿ ಮನೆ ನಿರ್ಮಾಣಕ್ಕೆ 174 ಕೋಟಿ ರೂಪಾಯಿ ಲಭ್ಯವಿದ್ದು, ಇದಲ್ಲದೇ ಉಳಿದಿರುವ ಅನುದಾನದಲ್ಲಿ ರಸ್ತೆ ದುರಸ್ತಿ ಮತ್ತಿತರ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಕೋವಿಡ್-19 ಸೋಂಕಿತರಿಗೆ ವೆಂಟಿಲೇಟರ್ ಬದಲಾಗಿ ಸುಲಭ ಚಿಕಿತ್ಸೆ ನೀಡಬಹುದಾದ ನಾಲ್ಕು ಹೈಫ್ಲೋ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳನ್ನು ಮುಖ್ಯಮಂತ್ರಿ ಇಂದು ಬಿಮ್ಸ್ ಆಸ್ಪತ್ರೆಗೆ ಸಮರ್ಪಿಸಿದರು.ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲರು ಕೊಡುಗೆಯಾಗಿ ನೀಡಿದ ಈ ಉಪಕರಣಗಳನ್ನು ಮುಖ್ಯಮಂತ್ರಿ ಆಸ್ಪತ್ರೆಗೆ ನೀಡಿದರು.

 ಕೋವಿಡ್-19 ಸೋಂಕಿತರಿಗೆ ವೆಂಟಿಲೇಟರ್ ಬದಲಾಗಿ ಸುಲಭ ಚಿಕಿತ್ಸೆ ನೀಡಬಹುದಾದ ನಾಲ್ಕು ಹೈಫ್ಲೋ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳನ್ನು ಮುಖ್ಯಮಂತ್ರಿ ಶ್ರೀ @BSYBJP ರವರು ಇಂದು ಬಿಮ್ಸ್ ಆಸ್ಪತ್ರೆಗೆ ಸಮರ್ಪಿಸಿದರು.

ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲರು ಕೊಡಮಾಡಿದ ಈ ಉಪಕರಣಗಳನ್ನು ಮುಖ್ಯಮಂತ್ರಿಗಳು ಆಸ್ಪತ್ರೆಗೆ ನೀಡಿದರು. pic.twitter.com/XeMsDflYxz

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com