ಕಣ್ವ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವ್ಯವಸ್ಥಾಪಕ ನಿರ್ದೇಶಕರ ಬಂಧಿಸಿದ ಜಾರಿ ನಿರ್ದೇಶನಾಲಯ

ಭೂಮಿ ಖರೀದಿಯಲ್ಲಿ ವಂಚನೆ ಆರೋಪ ಸಂಬಂಧ ಕಣ್ವ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕ ಎನ್.ನಂಜುಂಡಯ್ಯ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ಭೂಮಿ ಖರೀದಿಯಲ್ಲಿ ವಂಚನೆ ಆರೋಪ ಸಂಬಂಧ ಕಣ್ವ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕ ಎನ್.ನಂಜುಂಡಯ್ಯ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ.

ಇತ್ತೀಚೆಗೆ ಇಡಿ ಅಧಿಕಾರಿಗಳು ಎಂಡಿ ನಂಜುಂಡಯ್ಯ ಸೇರಿ ಐವರು ನಿರ್ದೇಶಕರ ನಿವಾಸದ ಮೇಲೆ ದಾಳಿ ನಡೆಸಿದ್ದರು.ಈ ವೇಳೆ ಕೆಲವು ದಾಖಲೆಗಳು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆದುಕೊಂಡಿದ್ದರು.

ವಿಚಾರಣೆಗೆ ಆಗಮಿಸುವಂತೆ ನಂಜುಂಡಯ್ಯ ಅವರಿಗೆ ನೊಟೀಸ್ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

2019ರಲ್ಲೂ ಬಂಧನ
ಇನ್ನು ಇದೇ ಕಣ್ವ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕ ಎನ್.ನಂಜುಂಡಯ್ಯ ಅವರನ್ನು ಪೊಲೀಸರು ಬಂಧಿಸಿದ್ದರು. ಕಣ್ವ ಕೋ ಆಪರೇಟಿವ್ ಸೊಸೈಟಿ ವಿರುದ್ಧ ಬಸವೇಶ್ವರ ನಗರ ಠಾಣೆಯಲ್ಲಿ ನಾಲ್ಕು ದೂರುಗಳು ದಾಖಲಾಗಿದ್ದವು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com