ರಾಜ್ಯ

ಪೈಶಾಚಿಕ ಕೃತ್ಯ; ಲೈಂಗಿಕ ಕ್ರಿಯೆಗೆ ನಕಾರ, ತಲೆ ಮೇಲೆ ಕಲ್ಲು ಹಾಕಿ ಕೊಂದು ಮಹಿಳೆ ಮೇಲೆ ಅತ್ಯಾಚಾರವೆಸಗಿದ ವಿಕೃತ ಕಾಮಿ

ಪೈಶಾಚಿಕ ಕೃತ್ಯ; ಲೈಂಗಿಕ ಕ್ರಿಯೆಗೆ ನಕಾರ, ತಲೆ ಮೇಲೆ ಕಲ್ಲು ಹಾಕಿ ಕೊಂದು ಮಹಿಳೆ ಮೇಲೆ ಅತ್ಯಾಚಾರವೆಸಗಿದ ವಿಕೃತ ಕಾಮಿ
ಸಾಂದರ್ಭಿಕ ಚಿತ್ರ
Published On :

ಹಾಸನ: ರಸ್ತೆಪಕ್ಕದಲ್ಲಿ ಮಲಗಿದ್ದ ನಿರ್ಗತಿಕ ಮಹಿಳೆ ಮೇಲೆ ಕಲ್ಲು ಎತ್ತಿಹಾಕಿ ಆಕೆಯ ಶವದೊಂದಿಗೆ ವಿಕೃತ ಕಾಮಿಯೋರ್ವ ಲೈಂಗಿಕ ಕ್ರಿಯೆ ನಡೆಸಿರುವ ಪೈಶಾಚಿಕ ಘಟನೆ ಹಾಸನದಲ್ಲಿ ಬೆಳಕಿಗೆ ಬಂದಿದೆ.

ಈ ಬಗ್ಗೆ ಸುದ್ದಿಮಾಧ್ಯಮಗಳು ವರದಿ ಮಾಡಿದ್ದು, ಸೋಮವಾರ ಹಾಸನ ಜಿಲ್ಲೆಯ ಬಿಎಂ ರಸ್ತೆಯಲ್ಲಿನ ಎನ್‍ಆರ್ ವೃತ್ತದ ಸಮೀಪವಿರುವ ಶ್ರೀ ಕನ್ನಿಕಾ ಪರಮೇಶ್ವರಿ ಸಹಕಾರಿ ಬ್ಯಾಂಕ್ ಎದುರು ರಾತ್ರಿ ರಸ್ತೆ ಪಕ್ಕದಲ್ಲಿ ಮಲಗಿದ್ದ ಮಹಿಳೆ ಮೇಲೆ ವ್ಯಕ್ತಿಯೋರ್ವ ತಲೆ ಮೇಲೆ ಕಲ್ಲು ಎತ್ತಿಹಾಕಿ ಆಕೆಯ ಶವದೊಂದಿಗೆ  ಲೈಂಗಿಕ ಕ್ರಿಯೆ ನಡೆಸಿದ್ದಾನೆ. ವಿಕೃತ ಕಾಮಿಯ ಪೈಶಾಚಿಕ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಹಿಳೆ ಮೇಲೆ ಕಲ್ಲು ಎತ್ತಿಹಾಕಿರುವ ವಿಕೃತಕಾಮಿ ಬಳಿಕ ಆಕೆಯ ಶವದ ಮೇಲೆ ಎರಗಿದ್ದಾನೆ. ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಸಿಸಿಟಿವಿ ವಿಡಿಯೋದಲ್ಲಿ ದಾಖಲಾಗಿರುವಂತೆ ಮೊದಲು ವಿಕೃತಕಾಮಿ ಆಕೆಯನ್ನು ಬಲವಂತೆ ಮಾಡಿದ್ದಾನೆ. ಇದಕ್ಕೆ ಮಹಿಳೆ ಒಪ್ಪದಿದ್ದಾಗ ಆಕೆ ಮಲಗಿದ ಬಳಿಕ ಆಕೆಯ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿದ್ದಾನೆ. ಬಳಿಕ ರಕ್ತದ ಮಡುವಿನಲಿ ಬಿದ್ದು ಮೃತಪಟ್ಟ ಮಹಿಳೆಯ ಮೇಲೆ ಕಾಮುಕ ಅತ್ಯಾಚಾರ ಎಸಗಿ  ಪರಾರಿಯಾಗಿದ್ದಾನೆ,  

ಪೊಲೀಸರು ಸಿಸಿ ಟಿವಿ ವಿಡಿಯೋ ಆಧರಿಸಿ ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. ಹಾಸನ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.