ಬೆಂಗಳೂರು: ಬೆಂಗಳೂರು ಸಿಟಿ ಪೊಲೀಸ್ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದಿದ್ದ ವ್ಯಕ್ತಿಯನ್ನು ಸಿಸಿಬಿ ಸೈಬರ್ ಪೊಲೀಸರು ಬಂಧಿಸಿದ್ದಾರೆ.
40 ವರ್ಷದ ಪಂಕಜ್ ಕುಮಾರ್ ಬಂಧಿತ ಆರೋಪಿ.
ಜನರನ್ನು ವಂಚಿಸಲು ನಕಲಿ ಖಾತೆ ತೆರದಿದ್ದ ಆರೋಪಿ ಪಂಕಜ್, ಹಲವರಿಗೆ ಪೊಲೀಸರ ಹೆಸರು ಬಳಸಿಕೊಂಡು ವಂಚನೆ ಮಾಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ನಕಲಿ ಖಾತೆಯ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಬೆನ್ನಿಗೇ ಆರೋಪಿಯನ್ನು ಬಂಧಿಸಲಾಗಿದೆ.
Advertisement