ಕೃಷಿ ಸಚಿವ ಬಿ.ಸಿ. ಪಾಟೀಲ್
ಕೃಷಿ ಸಚಿವ ಬಿ.ಸಿ. ಪಾಟೀಲ್

ಅನಾಮಧೇಯ ಬಿತ್ತನೆ ಬೀಜ, ರಸಗೊಬ್ಬರ ಖರೀದಿಸದಂತೆ ಕೃಷಿ ಸಚಿವ ಬಿ. ಸಿ.ಪಾಟೀಲ್ ಮನವಿ

ಅನಾಮಧೇಯ ಕಂಪೆನಿ ಹೆಸರಿನಲ್ಲಿ ರಸಗೊಬ್ಬರವಾಗಲೀ ಬಿತ್ತನೆಬೀಜವಾಗಲೀ ಮನೆಬಾಗಿಲಿಗೆ  ಬಂದರೆ ಅಥವಾ ಯಾರಾದರೂ ನೀಡಿದರೆ ರೈತರು ಅದನ್ನು ಖರೀದಿಸಬಾರದು ಎಂದು ಕೃಷಿ ಸಚಿವ  ಬಿ.ಸಿ.ಪಾಟೀಲ್ ರೈತರಲ್ಲಿ ಮನವಿ ಮಾಡಿದ್ದಾರೆ.

ಬೆಂಗಳೂರು: ಅನಾಮಧೇಯ ಕಂಪೆನಿ ಹೆಸರಿನಲ್ಲಿ ರಸಗೊಬ್ಬರವಾಗಲೀ ಬಿತ್ತನೆಬೀಜವಾಗಲೀ ಮನೆಬಾಗಿಲಿಗೆ ಬಂದರೆ ಅಥವಾ ಯಾರಾದರೂ ನೀಡಿದರೆ ರೈತರು ಅದನ್ನು ಖರೀದಿಸಬಾರದು ಎಂದು ಕೃಷಿ ಸಚಿವ  ಬಿ.ಸಿ.ಪಾಟೀಲ್ ರೈತರಲ್ಲಿ ಮನವಿ ಮಾಡಿದ್ದಾರೆ.

ಕೆಲವು ಒಳಸಂಚುಗಳು ಅನಾಮಧೇಯ ಕಂಪೆನಿ ರೈತರ ಮನೆಬಾಗಿಲಿಗೆ ಬಿತ್ತನೆ ಬೀಜ ರಸಗೊಬ್ಬರ ಸರಬರಾಜು ಮಾಡುತ್ತಿರುವುದು ತಮ್ಮ ಗಮನಕ್ಕೆ  ಬಂದಿದ್ದು, ಇಲಾಖೆ ಈ ಬಗ್ಗೆ ನಿಗಾ ಹಿಸಿದೆ. ರೈತರಿಗೆ ಅನ್ಯಾಯವಾಗುವಂತಹ ಯಾವುದೇ ಮೋಸವನ್ನಾಗಲೀ ನಕಲಿ ಜಾಲವನ್ನಾಗಲೀ ತಾವು ಎಂದಿಗೂ ಸಹಿಸುವುದಿಲ್ಲ.ಈ ಬಗ್ಗೆ ಸೂಕ್ತಕ್ರಮ  ವಹಿಸಲಾಗುವುದು ಎಂದಿದ್ದಾರೆ.

ರೈತರು ಆದಷ್ಟು ಅಧಿಕೃತ ಕಂಪೆನಿಗಳ ಇಲಾಖೆ ರೈತಸಂಪರ್ಕ ಕೇಂದ್ರ  ಸೂಚಿಸಿದ ಬಿತ್ತನೆ ಬೀಜ ರಾಸಾಯನಿಕ ಗೊಬ್ಬರ ಔಷಧಿಗಳನ್ನೇ ಖರೀದಿಸಿ ಬಳಸಬೇಕು.ಇಂತಹ ಯಾವುದೇ ಅನಾಮಧೇಯ ಪ್ಯಾಕೆಟ್ ಬಂದಲ್ಲಿ ಅಥವಾ ಯಾರಾದರೂ ನೀಡಿದಲ್ಲಿ ಆ ಬಗ್ಗೆ ರೈತರು  ಹಾಗೂ ಜನರು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ಇಲಾಖೆಯನ್ನು ಸಂಪರ್ಕಿಸಿ ಮಾಹಿತಿ ನೀಡಬೇಕೆಂದು ಮನವಿ ಮಾಡಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com