

ಬೆಂಗಳುರು: ಮಾಜಿ ಸಚಿವ, ಜೆಡಿಎಸ್ ಮುಖಂಡ ಎಚ್.ಡಿ. ರೇವಣ್ನ ಅವರಿಗೆ ಕೊರೋನಾವೈರಸ್ ಸೋಂಕು ದೃಢವಾಗಿದೆ.
ಈ ಬಗ್ಗೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು "ರೇವಣ್ಣ ಅವರು ಶೀಘ್ರ ಗುಣಮುಖರಾಗಿ ಜನಸೇವೆಗೆ ಮರಳಲಿ" ಎಂದು ಹಾರೈಸಿದ್ದಾರೆ.
"ಜೆಡಿಎಸ್ ಪಕ್ಷದ ನಾಯಕರು, ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣ ಅವರಿಗೆ ಕೊರೊನ ಸೋಂಕು ದೃಢಪಟ್ಟಿದೆ. ರೇವಣ್ಣ ಅವರು ಶೀಘ್ರ ಗುಣಮುಖರಾಗಿ ಜನಸೇವೆಗೆ ಮರಳಲಿ ಎಂದು ಹಾರೈಸುತ್ತೇನೆ. #GetWellSoon" ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.