ಮೈಸೂರಿನಲ್ಲಿ 'ಕೋವಿಶೀಲ್ಡ್' ಲಸಿಕೆಯ 2ನೇ ಹಂತದ ಪ್ರಯೋಗ ಆರಂಭ, ಐವರಿಗೆ ಲಸಿಕೆ

ಮೈಸೂರು: ಆಕ್ಸ್ಫರ್ಡ್ ಸಂಶೋಧಿಸಿರುವ 'ಕೋವಿಶೀಲ್ಡ್' ಲಸಿಕೆಯ ಎರಡನೇ ಹಂತದ ಪ್ರಯೋಗ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಆರಂಭವಾಗಿದ್ದು, ಐವರು ಸ್ವಯಂ ಸೇವಕರಿಗೆ ಲಸಿಕೆ ನೀಡಲಾಗಿದೆ.
ಸದ್ಯ ಲಸಿಕೆ ಹಾಕಿಸಿಕೊಂಡಿರುವ ಐವರು ಸ್ವಯಂ ಸೇವಕರ ಆರೋಗ್ಯ ಸ್ಥಿರವಾಗಿದ್ದು, ಲಸಿಕೆ ಪಡೆದ ನಂತರ ಅವರಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿಲ್ಲ ಮತ್ತು ರಿಯಾಕ್ಷನ್ ಸಹ ಆಗಿಲ್ಲ. ಹೀಗಾಗಿ ಲಸಿಕೆ ಮತ್ತೊಂದು ಹಂತದ ಸಕ್ಸಸ್ ಕಂಡಿದೆ ಎನ್ನಬಹದು.
ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿ ಜೆ ಎಸ್ ಎಸ್ ಅಕಾಡೆಮಿಕ್ ನ ಸಮಕುಲಾಧಿಪತಿ ಬಿ. ಸುರೇಶ್ ಅವರು, ಕೊರೋನಾಗೆ ಕಂಡು ಹಿಡಿದ ಲಸಿಕೆಯ ಮೊದಲ ಮಾನವ ಪ್ರಯೋಗ ಮೈಸೂರಿನಲ್ಲಿ ನಡೆಯುತ್ತಿದೆ. ಮೈಸೂರಿನ ಜೆಎಸ್ ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಲಸಿಕೆ ಪ್ರಯೋಗ ಮಾಡಲಾಗುತ್ತಿದ್ದು ಡಿಸೆಂಬರ್ ಅಂತ್ಯಕ್ಕೆ ಪ್ರಯೋಗದ ಫಲಿತಾಂಶ ಬರಲಿದೆ ಎಂದು ತಿಳಿಸಿದ್ದಾರೆ.
ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ನಿಂದ ಈ ಲಸಿಕೆ ಬಂದಿದ್ದು ನೋಂದಾಯಿತ ಸ್ವಯಂ ಸೇವಕರ ಮೇಲೆ ಮೊದಲ ಪ್ರಯೋಗ ನಡೆಸಲಾಗುತ್ತದೆ. ಒಟ್ಟಾರೇ 250 ಜನರ ಮೇಲೆ ಆಕ್ಸ್ ಫರ್ಡ್ ಕೋವಿಶೀಲ್ಡ್ ಲಸಿಕೆಯನ್ನ ಪ್ರಯೋಗ ಮಾಡಲಾಗುತ್ತದೆ ಎಂದು ಬಿ. ಸುರೇಶ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


