ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊರೋನಾ ಸೋಂಕು!

ರಾಜ್ಯದಲ್ಲಿ ಹಲವು ರಾಜಕಾರಣಿಗಳಿಗೆ ಕೊರೋನಾ ಸೋಂಕು ತಗುಲುತ್ತಿದ್ದು, ಈಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ. 
ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್
Updated on

ಬೆಂಗಳೂರು: ರಾಜ್ಯದಲ್ಲಿ ರಾಜಕಾರಣಿಗಳಿಗೆ ಕೊರೋನಾ ಸೋಂಕು ತಗುಲುತ್ತಿದ್ದು, ಈಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ. 

ಈ ಬಗ್ಗೆ ಸ್ವತಃ ನಳಿನ್ ಕುಮಾರ್ ಟ್ವೀಟ್ ಮಾಡಿದ್ದು, ವೈದ್ಯರ ಸಲಹೆ ಮೇರೆಗೆ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ, ಆದರೆ ರೋಗ ಲಕ್ಷಣಗಳಿಲ್ಲ ಕಂಡುಬಂದಿಲ್ಲ ಎಂದು ಹೇಳಿದ್ದಾರೆ. 

:ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ.

ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. 

ಇತ್ತೀಚೆಗಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಕೊರೋನಾ ಸೋಂಕು ತಗುಲಿತ್ತು. ಇದಕ್ಕೂ ಮುನ್ನ ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಯಡಿಯೂರಪ್ಪ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com