ಸಾಂದರ್ಭಿಕ ಚಿತ್ರ
ರಾಜ್ಯ
ರಾಯಚೂರು: ಬಟ್ಟೆ ಒಗೆಯುವಾಗ ಹೊಂಡದಲ್ಲಿ ಮುಳುಗಿ ಮೂವರು ಸಾವು
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಕೋಥಾ ಗ್ರಾಮದಲ್ಲಿ ಇಬ್ಬರು ಮಕ್ಕಳು ಮತ್ತು ತಾಯಿ ಸೇರಿದಂತೆ ಕುಟುಂಬದ ಮೂವರು ಸಣ್ಣ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ರಾಯಚೂರು: ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಕೋಥಾ ಗ್ರಾಮದಲ್ಲಿ ಇಬ್ಬರು ಮಕ್ಕಳು ಮತ್ತು ತಾಯಿ ಸೇರಿದಂತೆ ಕುಟುಂಬದ ಮೂವರು ಸಣ್ಣ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಶನಿವಾರ ಸಂಜೆ ಬಟ್ಟೆ ಒಗೆಯಲು ಅವರು ಹೊಂಡಕ್ಕೆ ಹೋಗಿದ್ದಾಗ ಈ ದುರ್ಘಟನೆ ನಡೆದಿದ್ದು, ಭಾನುವಾರ ಬೆಳಿಗ್ಗೆ ಮೃತ ದೇಹಗಳನ್ನು ಹೊಂಡದಿಂದ ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಕೋಥ ಗ್ರಾಮದ ತಾಯಿ ಪಾರ್ವತಿ (30), ಮಕ್ಕಳಾದ ಅರ್ಜುನ್ (10) ಮತ್ತು ಶಿಲ್ಪಾ (8) ಎಂದು ಗುರುತಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ