ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾಗೆ 113 ಬಲಿ, ಸೋಂಕಿತರಿಗಿಂತ ಚೇತರಿಕೆ ಸಂಖ್ಯೆಯಲ್ಲಿ ಹೆಚ್ಚಳ!

ರಾಜ್ಯದಲ್ಲಿ ಇಂದು ಕೊರೋನಾಗೆ 113 ಬಲಿ, ಸೋಂಕಿತರಿಗಿಂತ ಚೇತರಿಕೆ ಸಂಖ್ಯೆಯಲ್ಲಿ ಹೆಚ್ಚಳ!
ಸಂಗ್ರಹ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿಗಿಂತ ಚೇತರಿಕೆ ಪ್ರಮಾಣ ಹೆಚ್ಚಾಗಿದ್ದು ರಾಜ್ಯದ ಜನತೆಗೆ ಕೊಂಚ ನೆಮ್ಮದಿ ಸಿಕ್ಕಂತಾಗಿದೆ. 

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 7,238 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಕೊರೋನಾ ಮಹಾಮಾರಿಗೆ 6,495 ಮಂದಿ ತುತ್ತಾಗಿದ್ದು ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,42,423ಕ್ಕೇರಿಕೆಯಾಗಿದೆ.

ಸೋಮವಾರ ಒಂದೇ ದಿನ ಬರೋಬ್ಬರಿ 113 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,702ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 27 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 113 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 7,238 ಮಂದಿ ಗುಣಮುಖರಾಗಿದ್ದಾರೆ. ಈ ಮೂಲಕ ಒಟ್ಟು 2,49,467 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ಧಾರೆ. 87,235 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 1,862 ಮಂದಿಗೆ ಕೊರೋನಾ ವಕ್ಕರಿಸಿದ್ದು ಸೋಂಕಿತರ ಸಂಖ್ಯೆ 1,27,336ಕ್ಕೆ ಏರಿಕೆಯಾಗಿದೆ. ಇನ್ನು 27 ಮಂದಿ ಮೃತಪಟ್ಟಿದ್ದು ಸಿಲಿಕಾನ್ ಸಿಟಿಯಲ್ಲಿ ಒಟ್ಟಾರೆ ಕೊರೋನಾಗೆ 1,965ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಒಂದೇ ದಿನ 2,422 ಮಂದಿ ಡಿಸ್ಚಾರ್ಜ್ ಆಗಿದ್ದು ಒಟ್ಟಾರೆ 90,043 ಮಂದಿ ಚೇತರಿಸಿಕೊಂಡಿದ್ದಾರೆ. ಇನ್ನು 37,116 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.