ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳಿಸಲು ಮಾಫಿಯಾ ಹಣ ಬಳಕೆ: ಎಚ್‌ಡಿ ಕುಮಾರಸ್ವಾಮಿ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳಿಸಲು ಮಾಫಿಯಾದ ಹಣ ಬಳಸಲಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ‌ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸ್ಫೋಟಿಸಿದ್ದಾರೆ.
Published on

ತುಮಕೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳಿಸಲು ಮಾಫಿಯಾದ ಹಣ ಬಳಸಲಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ‌ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸ್ಫೋಟಿಸಿದ್ದಾರೆ.

ಇಲ್ಲಿ ಸುದ್ದಿಗಾರರಿಗೆ ಬೆಂಗಳೂರು ಡ್ರಗ್ ಮಾಫಿಯಾ ವಿಚಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಮೈತ್ರಿ ಸರ್ಕಾರ ಅಸ್ಥಿರಗೊಳಿಸಲು ಕ್ರಿಕೆಟ್ ಬೆಟ್ಟಿಂಗ್ ಹಾಗೂ ಡ್ರಗ್ ನಿಂದ ಬಂದಂತಹ ಹಣ ಬಳಸಲಾಗಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ಪ್ರತಿಭಟನೆಗೆಂದು ಕುಮಾರಸ್ವಾಮಿ ಅವರು ತುರುವೇಕೆರೆಗೆ ಬಂದಿದ್ದರು. ಆದರೆ ಸೆಕ್ಷನ್ 144 ಇದಿದ್ದರಿಂದ ಪ್ರತಿಭಟನೆ ಕೈಬಿಟ್ಟರು. ನಂತರ ಮಾತನಾಡಿದ ಅವರು ನನ್ನ ಅವಧಿಯಲ್ಲಿ ಡ್ರಗ್ ಮಾಫಿಯಾದ ಬಗ್ಗೆ ಕಠಿಣ ಕ್ರಮ ಕೈಗೊಂಡಿದ್ದೆ ಎಂದು ಹೇಳಿದ್ದಾರೆ. 

ನಾನು ಕಠಿಣ ಕ್ರಮಕೈಗೊಂಡಿದ್ದರ ಬಗ್ಗೆ ಮಾಧ್ಯಮಗಳಲ್ಲಿ ಹೆಚ್ಚಿನ ಚರ್ಚೆ ಆಗಬಾರದು. ಇದರಿಂದ ಎಳೆ ಮಕ್ಕಳ ಮೇಲೆ ದುಷ್ಪರಿಣಾಮ ಬೀರುತ್ತದೆ. ನಾನು ಚಿತ್ರ ನಿರ್ಮಾಪಕನಾಗಿದ್ದ ಕಾಲದಲ್ಲಿ ಡ್ರಗ್ ಮಾಫಿಯಾ ಇರೋದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com