ಕೊರೊನಾ ಆರ್ಭಟಕ್ಕೆ ಪೊಲೀಸ್ ಪೇದೆ ಬಲಿ

ಕೊರೊನ ಆರ್ಭಟಕ್ಕೆ ಸಿಲುಕಿ ಮತ್ತೊಬ್ಬ ಪೊಲೀ ಸ್ ಪೇದೆ ಮೃತಪಟ್ಟಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಎನ್.ಸುರೇಶ್(46) ಕೊರೊನಾಗೆ ಬಲಿಯಾದವರು.
ಕರ್ನಾಟಕ ಪೊಲೀಸರು
ಕರ್ನಾಟಕ ಪೊಲೀಸರು
Updated on: 

ಚಾಮರಾಜನಗರ: ಕೊರೊನ ಆರ್ಭಟಕ್ಕೆ ಸಿಲುಕಿ ಮತ್ತೊಬ್ಬ ಪೊಲೀ ಸ್ ಪೇದೆ ಮೃತಪಟ್ಟಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಎನ್.ಸುರೇಶ್(46) ಕೊರೊನಾಗೆ ಬಲಿಯಾದವರು.

ಚಾಮರಾಜನಗರ ತಾಲೂಕಿನ ಕಿಲಗೆರೆ ಗ್ರಾಮದವರಾದ ಕೆ.ಎನ್.ಸುರೇಶ್ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೊರೊನ ದೃಢಪಟ್ಟಿದ್ದ ಹಿನ್ನೆಲೆಯಲ್ಲಿ ಅವರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆಗಸ್ಟ್ 14ರಂದು ಉಸಿರಾಟದ ತೊಂದರೆಯುಂಟಾದ ಪರಿಣಾಮ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಆದರೆ ತಡ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರ ಅಂತ್ಯಕ್ರಿಯೆಯು ತಾಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆಯಲಿದೆ ಎನ್ನುವ ಮಾಹಿತಿ ಅವರ  ಕುಟುಂಬದವರ ಮೂಲಗಳಿಂದ ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com