ಕೊರೋನಾ ಸೋಂಕಿನಿಂದ ಡಿಕೆಶಿ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

ಕೊರೋನಾ ಸೋಂಕಿನಿಂದ ಗುಣಮುಖರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಸ್ಪತ್ರೆಯಿಂದ ಇಂದು ಬಿಡುಗಡೆಯಾಗಿದ್ದಾರೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ಕೊರೋನಾ ಸೋಂಕಿನಿಂದ ಗುಣಮುಖರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಸ್ಪತ್ರೆಯಿಂದ ಇಂದು ಬಿಡುಗಡೆಯಾಗಿದ್ದಾರೆ.

ಡಿಕೆ ಶಿವಕುಮಾರ್ ಅವರಿಗೆ ಕಳೆದ ಆರು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಸುಗುಣ ಆಸ್ಪತ್ರೆಗೆ ದಾಖಲಾಗಿದ್ದರು. 

ಇದೀಗ ಸೋಂಕಿನಿಂದ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಪುಷ್ಪ ಗುಚ್ಛ ನೀಡುವ ಮೂಲಕ ಡಿಕೆ ಶಿವಕುಮಾರ್ ಅವರನ್ನು ಆಸ್ಪತ್ರೆಯಿಂದ ಬೀಳ್ಗೂಟ್ಟಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಡಾ. ರಂಗನಾಥ್ ಮತ್ತಿತರರು ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com