ರಾಜ್ಯ
ಮಂಡ್ಯ: ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ
ತನ್ನ ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ.
ಮಂಡ್ಯ: ತನ್ನ ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ.
ಮಕ್ಕಳಾದ ಗಾನವಿ(6) ಮತ್ತು ಉಲ್ಲಾಸ್ (4) ಎಂಬವರನ್ನು ನೇಣಿಗೆ ಹಾಕಿ ಸಾಯಿಸಿದ ಬಳಿಕ ತಾಯಿ ನಿವೇದಿತಾ(26) ಕೂಡ ನೇಣಿಗೆ ಶರಣಾಗಿದ್ದಾರೆ.
7 ವರ್ಷಗಳ ಹಿಂದೆ ಕೃಷ್ಣೇಗೌಡ ಎಂಬುವವರನ್ನು ನಿವೇದಿತಾ ವಿವಾಹವಾಗಿದ್ದು, ಇಬ್ಬರೂ ಮಕ್ಕಳಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಪೋಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮೇಲುಕೋಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ