ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಪೊಲೀಸ್ ಕ್ವಾರ್ಟರ್ಸ್ ಮೇಲಿಂದ ಜಿಗಿದು ಮಹಿಳೆ ಆತ್ಮಹತ್ಯೆ

ನಗರದ ಕೆಂಗೇರಿಯ ಪೊಲೀಸ್ ಕ್ವಾರ್ಟರ್ಸ್ ಮೇಲಿಂದ ಜಿಗಿದು ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ವರದಿಯಾಗಿದೆ.

ಬೆಂಗಳೂರು: ನಗರದ ಕೆಂಗೇರಿಯ ಪೊಲೀಸ್ ಕ್ವಾರ್ಟರ್ಸ್ ಮೇಲಿಂದ ಜಿಗಿದು ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಸುಜಾತಾ ಎಂದು ಗುರುತಿಸಲಾಗಿದ್ದು. ಇಂದು ಬೆಳಗ್ಗೆ ಕೆಂಗೇರಿ ಪೊಲೀಸ್ ಕ್ವಾರ್ಟರ್ಸ್ ಬಳಿ ಬಂದಿದ್ದ ಅವರು 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಸುಜಾತಾ, ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆಯನ್ನು ಪಡೆಯುತ್ತಿದ್ದರು ಎನ್ನಲಾಗಿದೆ.

ಸುಜಾತಾ, 9 ವರ್ಷಗಳ ಹಿಂದೆ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com