ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸೌರ ವಿದ್ಯುತ್ ಘಟಕ: ಏಪ್ರಿಲ್ ಹೊತ್ತಿಗೆ ಕಾರ್ಯಾರಂಭ

ಇನ್ನು ಮೂರ್ನಾಲ್ಕು ತಿಂಗಳಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸೌರ ವಿದ್ಯುತ್ ಘಟಕ ತಲೆಯೆತ್ತಲಿದೆ. 8 ಮೆಗಾವ್ಯಾಟ್ ಸಾಮರ್ಥ್ಯದ ಸೌರವಿದ್ಯುತ್ ಘಟಕವನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸುವ ಮೂಲಕ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸ್ಥಾಪಿಸಲಾಗುವುದು.
ಹುಬ್ಬಳ್ಳಿ ವಿಮಾನ ನಿಲ್ದಾಣ
ಹುಬ್ಬಳ್ಳಿ ವಿಮಾನ ನಿಲ್ದಾಣ
Updated on

ಹುಬ್ಬಳ್ಳಿ: ಇನ್ನು ಮೂರ್ನಾಲ್ಕು ತಿಂಗಳಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸೌರ ವಿದ್ಯುತ್ ಘಟಕ ತಲೆಯೆತ್ತಲಿದೆ. 8 ಮೆಗಾವ್ಯಾಟ್ ಸಾಮರ್ಥ್ಯದ ಸೌರವಿದ್ಯುತ್ ಘಟಕವನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸುವ ಮೂಲಕ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸ್ಥಾಪಿಸಲಾಗುವುದು.

ವಿಮಾನ ನಿಲ್ದಾಣ ಪ್ರಾಧಿಕಾರ 8 ಮೆಗಾವ್ಯಾಟ್ ವಿದ್ಯುತ್ ಘಟಕವನ್ನು 64 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಲು ಯೋಜಿಸುತ್ತಿತ್ತು. ಕಳೆದ ವರ್ಷದ ಮಧ್ಯಭಾಗದಲ್ಲಿ ಈ ಸಂಬಂಧ ಗುಜರಾತ್ ಕಂಪೆನಿಯೊಂದಕ್ಕೆ ಕೆಲಸದ ಆರ್ಡರ್ ನ್ನು ನೀಡಲಾಗಿತ್ತು. ನಂತರ ಕೇಬಲ್ ಹಾಕುವುದು, ಟ್ರಾನ್ಸ್ ಫಾರ್ಮರ್ ಗಳ ಸ್ಥಾಪನೆ ಮತ್ತು ಇತರ ಕೆಲಸಗಳನ್ನು ಪೂರ್ಣಗೊಳಿಸಲಾಗಿತ್ತು ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕ ಪ್ರಮೋದ್ ಕುಮಾರ್ ತಿಳಿಸಿದ್ದಾರೆ.

ಹಸಿರು ನವೀಕರಣ ಇಂಧನವನ್ನು ಅಭಿವೃದ್ಧಿಪಡಿಸಲು ವಿಮಾನ ನಿಲ್ದಾಣ ಪ್ರಾಧಿಕಾರ, ಹುಬ್ಬಳ್ಳಿಯಲ್ಲಿ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಘಟಕದಿಂದ ಉತ್ಪಾದನೆಯಾಗುವ ಸೌರ ವಿದ್ಯುತ್ ನ್ನು ಹುಬ್ಬಳ್ಳಿಯ ಟರ್ಮಿನಲ್ ಕಟ್ಟಡದ ವಿದ್ಯುತ್ ಅವಶ್ಯಕತೆಗಳನ್ನು ಈಡೇರಿಸಲು ಪೂರೈಸಬಹುದು. ಕೆಲಸ ಪೂರ್ಣಗೊಂಡ ಮೇಲೆ ಹುಬ್ಬಳ್ಳಿ ಬಿಲ್ ನಲ್ಲಿ ಶೇಕಡಾ 80ರಿಂದ 90ರಷ್ಟು ಕಡಿತವಾಗಲಿದೆ ಎಂದು ಹೇಳಿದರು.

ಕೆಂಪೇಗೌಡ ವಿಮಾನ ನಿಲ್ದಾಣ ಮತ್ತು ಮಂಗಳೂರು ವಿಮಾನ ನಿಲ್ದಾಣ ಹೊರತುಪಡಿಸಿ ಇಲ್ಲಿ ಉತ್ಪಾದನೆಯಾಗುವ ಸೌರ ವಿದ್ಯುತ್ ನ್ನು ಕೆಪಿಟಿಸಿ ಮೂಲಕ ಇತರ ವಿಮಾನ ನಿಲ್ದಾಣಗಳಿಗೆ ಪೂರೈಸಲಾಗುತ್ತದೆ. ಬೆಳಗಾವಿ, ಕಲಬುರಗಿ, ಮೈಸೂರು ಮತ್ತು ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಪೂರೈಸಲಾಗುತ್ತದೆ. 

ಯೋಜನೆಗೆ ಸುಮಾರು 38 ಎಕರೆ ಭೂಮಿಯನ್ನು ಗುರುತಿಸಲಾಗಿದ್ದು, 24 ಎಕರೆಗಳಲ್ಲಿ 400 ಸೌರ ವಿದ್ಯುತ್ ಘಟಕಗಳನ್ನು ನಿರ್ಮಿಸಲಾಗುತ್ತದೆ.ಉಳಿದ ಪ್ರದೇಶವನ್ನು ಟ್ರಾನ್ಸ್ ಫಾರ್ಮರ್ ಗಳು, ರೂಮುಗಳು ಮತ್ತು ಇತರ ಉದ್ದೇಶಗಳಿಗೆ ಬಳಸಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com