ಶಿವಮೊಗ್ಗದಲ್ಲಿ ನಾಲ್ಕು ಕೊರೋನಾ ಲಸಿಕಾ ಸಂಗ್ರಹ ಕೇಂದ್ರ ಸ್ಥಾಪನೆ

ಕೊರೋನಾ ಲಸಿಕೆ ತಯಾರಾದ ನಂತರ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಕೊರೋನಾ ಲಸಿಕೆ ತಯಾರಾದ ನಂತರ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಹೀಗಾಗಿ ಲಸಿಕೆ ಸಂಗ್ರಹಕ್ಕಾಗಿ ಬೃಹತ್ ಜಾಗಗಳ ಅವಶ್ಯಕತೆಯಿದ್ದು, ಸ್ಥಳ ಗುರುತಿಸಲಾಗಿದೆ. ರಾಜ್ಯ ಸರ್ಕಾರ ಎಲ್ಲಾ ಜಿಲ್ಲೆಗಳಿಗೂ ಮುಂಚೂಣಿಯಲ್ಲಿರುವ ಖಾಸಗಿ ಮತ್ತು ಸರ್ಕಾರಿ ಆರೋಗ್ಯ ಕಾರ್ಯಕರ್ತರ ಪಟ್ಟಿ ಸಿದ್ದ ಮಾಡಲು ಆದೇಶ ಹೊರಡಿಸಿದೆ.

ಆರೋಗ್ಯ ಕಾರ್ಯಕರ್ತರ ಮಾಹಿತಿ ಸಂಗ್ರಹ ಕೆಲಸ ಆರಂಭವಾಗಿದ್ದು, 20,549 ಆರೋಗ್ಯ ಕಾರ್ಯಕರ್ತರನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ರಾಜೇಶ್ ಸುರಗಿಹಳ್ಳಿ ತಿಳಿಸಿದ್ದಾರೆ.

ಜನವರಿ ಅಂತ್ಯದೊಳಗೆ ಲಸಿಕೆ ಸಿದ್ಧವಾಗುವ ಸಾಧ್ಯತೆಯಿದೆ, ಕಾರ್ಯಕರ್ತರ ಎಲ್ಲಾ ಮಾಹಿತಿಗಳನ್ನು ಸಿದ್ದಪಡಿಸುವಂತೆ ಸರ್ಕಾರ ಸೂಚಿಸಿದೆ ಎಂದು ಅವರು ತಿಳಿಸಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com