ಶಿವಮೊಗ್ಗ: ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್; ಮುಖ್ಯ ಆರೋಪಿ ವಾರ್ಡ್ ಬಾಯ್ ಸೇರಿ ನಾಲ್ವರು ಅರೆಸ್ಟ್

ಶಿವಮೊಗ್ಗದ ಆಸ್ಪತ್ರೆಯಲ್ಲಿ ತಾಯಿಯ ಆರೈಕೆಗಾಗಿ ತಂಗಿದ್ದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಆಸ್ಪತ್ರೆಯ ವಾರ್ಡ್ ಬಾಯ್ ಸೇರಿ ನಾಲ್ವರನ್ನು ಪೋಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ: ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್; ಮುಖ್ಯ ಆರೋಪಿ ವಾರ್ಡ್ ಬಾಯ್ ಸೇರಿ ನಾಲ್ವರು ಅರೆಸ್ಟ್

ಬೆಂಗಳೂರು: ಶಿವಮೊಗ್ಗದ ಆಸ್ಪತ್ರೆಯಲ್ಲಿ ತಾಯಿಯ ಆರೈಕೆಗಾಗಿ ತಂಗಿದ್ದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಆಸ್ಪತ್ರೆಯ ವಾರ್ಡ್ ಬಾಯ್ ಸೇರಿ ನಾಲ್ವರನ್ನು ಪೋಲೀಸರು ಬಂಧಿಸಿದ್ದಾರೆ.

ಶಿವಮೊಗ್ಗದ ಮೆಕ್‌ಗ್ಯಾನ್ ಆಸ್ಪತ್ರೆಯ ವಾರ್ಡ್ ಬಾಯ್ ಮನೋಜ್ ಹಾಗೂ ಅವನ ಸ್ನೇಹಿತರನ್ನು ನಾವು ಬಂಧಿಸಿದ್ದೇವೆ. ಸಧ್ಯ ಅವರಿಗೆ ಕೌನ್ಸೆಲಿಂಗ್ ನೀಡುತ್ತಿದ್ದೇವೆ ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜ್ ಪಿಟಿಐಗೆ ತಿಳಿಸಿದ್ದಾರೆ.

16 ವರ್ಷದ ಸಂತ್ರಸ್ತೆ ಆಸ್ಪತ್ರೆಯಲ್ಲಿ ತಾಯಿಯನ್ನು ನೋಡಿಕೊಳ್ಳುತ್ತಿದ್ದಾಗ ಮುಖ್ಯ ಆರೋಪಿ ಮನೋಜ್ ಆಕೆಯೊಂದಿಗೆ ಸ್ನೇಹ ಬೆಳೆಸಿ ಆಕೆಯನ್ನು ಉಪಾಯವಾಗಿ ಹೊರಗೆ ಕರೆದೊಯ್ದು ಅಲ್ಲಿ ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ ನಡೆಸಿದ್ದ.

ಈ ಸಂಬಂಧ ಸಂಸ್ತ್ರಸ್ತೆ ತನ್ನ ತಾಯಿಗೆ ತಿಳಿಸಿದಾಗ ಆಕೆ ರೋಪಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಪೋಲೀಸರು ದೂರಿನ ಆಧಾರದ ಮೇಲೆ ಪೊಲೀಸರು ನಾಲ್ವರನ್ನು ಬಂಧಿಸಿ ತನಿಖೆ ನಡೆಸಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com