ಮಾದಕ ವಸ್ತುಗಳ ನಿಯಂತ್ರಣಕ್ಕೆ ಕ್ರಮ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ರಾಜ್ಯದಲ್ಲಿ ಮಾದಕ ವಸ್ತುಗಳ ಪಿಡುಗನ್ನು ನಿರ್ಮೂಲನೆ ಮಾಡಲು ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಸಹ ಒಟ್ಟಾಗಿ ಸೇರಿ ಈ ಪಿಡುಗಿನ ವಿರುದ್ದ ಕೈ ಜೋಡಿಸಬೇಕೆಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಿಧಾನಸಭೆಯಲ್ಲಿಂದು ತಿಳಿಸಿದ್ದಾರೆ.
ಬಸವರಾಜ್ ಬೊಮ್ಮಾಯಿ
ಬಸವರಾಜ್ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಮಾದಕ ವಸ್ತುಗಳ ಪಿಡುಗನ್ನು ನಿರ್ಮೂಲನೆ ಮಾಡಲು ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಸಹ ಒಟ್ಟಾಗಿ ಸೇರಿ ಈ ಪಿಡುಗಿನ ವಿರುದ್ದ ಕೈ ಜೋಡಿಸಬೇಕೆಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಿಧಾನಸಭೆಯಲ್ಲಿಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ನ ಈಶ್ವರ ಖಂಡ್ರೆ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ರಾಜ್ಯದಲ್ಲಿ ಮಾದಕ ದ್ರವ್ಯದ ಪಿಡುಗು ದಿನೇ ದಿನೇ ಹೆಚ್ಚಾಗುತ್ತಿದೆ. ಡ್ರಗ್ಸ್ ನಿಯಂತ್ರಣ ಕಾಯ್ದೆಯ ಅಡಿಯಲ್ಲಿ ಇಲ್ಲಿಯವರೆಗೆ ಎಷ್ಟು ಪ್ರಕರಣಗಳು ದಾಖಲಾಗಿವೆ. ಡ್ರಗ್ಸ್ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ತಂದು ಬಿಗಿಯಾದ ಕಾನೂನು ತರಲು ಸರ್ಕಾರ ತೆಗೆದುಕೊಳ್ಳಲಾಗಿದೆ ಎಂದರು.

ಸರ್ಕಾರ ಮಾದಕ ದ್ರವ್ಯಗಳ ಮಾರಾಟ, ಸಾಗಣೆ ಮತ್ತು ಸೇವನೆಯನ್ನು ತಡೆಗಟ್ಟಲು ಹಾಗೂ ನಿಯಂತ್ರಿಸಲು ಎನ್.ಡಿ.ಪಿ.ಎಸ್. ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಈ ಕಾಯ್ದೆಗೆ ಇನ್ನೂ ಹೆಚ್ಚಿನ ಬಲ ನೀಡಲು ತಿದ್ದುಪಡಿ ತರಲು ಇಚ್ಚಿಸಿದ್ದು, ಈ ಪ್ರಕ್ರಿಯೆಯು ಪ್ರಗತಿಯಲ್ಲಿದೆ ಎಂದು ಉತ್ತರಿಸಿದರು.

ಶಾಲಾ ಕಾಲೇಜು ಮತ್ತು ವಿಶ್ವ ವಿದ್ಯಾಲಯಗಳ ಹಂತದಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ಸಾಗಣೆ ತಡೆಗಟ್ಟಲು ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡಂತೆ, ಸಮಿತಿ ರಚಿಸಿ ಕರ್ತವ್ಯ ನಿಗದಿಪಡಿಸಲಾಗಿದೆ. ಬೆಂಗಳೂರು ನಗರ ಪೋಲೀಸ್ ಆಯುಕ್ತರು ಮತ್ತು ವಲಯ ಪೋಲೀಸ್ ಮಹಾ ನಿರೀಕ್ಷಕರುಗಳಿಗೆ ಪಿ.ಐ.ಟಿ, ಎನ್.ಡಿ.ಪಿ.ಎಸ್. ಕಾಯ್ದೆ, 1988ರ ಕಲಂ 3(1)ರಡಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೂಢಿಗತ ಅಪರಾಧಿಗಳನ್ನು ಬಂಧಿಸಲು ಅಧಿಕಾರ ನೀಡಲಾಗಿದೆ ಎಂದು ಹೇಳಿದರು.

ಡ್ರಗ್ ಮಾಫಿಯಾ ವಿರುದ್ಧ ಸಮರ ಸಾರಿದ್ದು, ಯಾವುದೇ ಒತ್ತಡಕ್ಕೆ ಮಣಿಯದೆ ಪ್ರಕರಣಗಳಲ್ಲಿ ಭಾಗಿಯಾದವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಡ್ರಗ್ಸ್ ಪ್ರಕರಣಗಳ ತನಿಖೆಯನ್ನು ತೀವ್ರಗೊಳಿಸಲು ನಾರ್ಕೋಟಿಕ್ ಲ್ಯಾಬ್ ಗಳನ್ನು ಹೆಚ್ಚಳ ಮಾಡಲಾಗುವುದು. ಸಿಂಥೆಟಿಕ್ ಡ್ರಗ್ಸ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರ ಬಗ್ಗೆ ಈಗಾಗಲೇ ಕಾರ್ಯಾಚರಣೆ  ಪ್ರಾರಂಭಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಮಾದಕ ವಸ್ತು ಪಿಡುಗನ್ನು ನಿಯಂತ್ರಿಸುವ ಸಂಬಂಧ ಗೃಹ ಸಚಿವರು ಕೈಗೊಂಡ ಕ್ರಮ, ನೀಡಿದ ಉತ್ತರಕ್ಕೆ ಸಭಾಧ್ಯಕ್ಷರು ಅಭಿನಂದನೆಗಳನ್ನು ಸಲ್ಲಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com