ವಿದ್ಯಾಗಮ ಪುನರಾರಂಭ ಕುರಿತು 10 ದಿನಗಳಲ್ಲಿ ನಿರ್ಧರಿಸಿ: ಸರ್ಕಾರಕ್ಕೆ ಹೈಕೋರ್ಟ್

ಸರ್ಕಾರಿ ಮತ್ತು ಅನುದಾನಿಕ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ವಿದ್ಯಾಗಮ ಯೋಜನೆಯನ್ನು ಪುನಾರಂಭಿಸಬಹುದೇ ಎಂಬ ಬಗ್ಗೆ 10 ದಿನಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿಕ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ವಿದ್ಯಾಗಮ ಯೋಜನೆಯನ್ನು ಪುನಾರಂಭಿಸಬಹುದೇ ಎಂಬ ಬಗ್ಗೆ 10 ದಿನಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. 

ಬಡಮಕ್ಕಳಿಗೆ ಆನ್'ಲೈನ್ ಮೂಲಕ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ಲ್ಯಾಪ್'ಟಾಪ್, ಇಂಟರ್ನೆಟ್, ಮೊಬೈಲ್ ಸೇರಿ ಅಗತ್ಯ ತಾಂತ್ರಿಕ ಸೌಲಭ್ಯ ಒದಗಿಸಲು ಸರ್ಕಾರಕ್ಕೆ ನರ್ದೇಶಿಸಲು ಕೋರಿ ನಗರದ ವಕೀಲ ಎ.ಎ.ಸಂಜೀವ್ ನರೇನ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾ.ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿ ಈ ನಿರ್ದೇಶನ ನೀಡಿತು.
 
ವಿಚಾರಣೆ ವೇಳೆ ಸರ್ಕಾರಿ ವಕೀಲರು ವಾದಿಸಿ, ಕೋವಿಡ್ ಪ್ರಕರಣಗಳು ಹೆಚ್ಚಾದ ಪರಿಣಾಮ ಸರ್ಕಾರದ ಬೊಕ್ಕಸ ಬರಿದಾಗಿದೆ. ಕೋವಿಡ್'ನಿಂದ ವಿದ್ಯಾಗಮ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com