'ಕಾವೇರಿ ಕಾಲಿಂಗ್' ಸರ್ಕಾರದ ಯೋಜನೆಯೇ? ನಿಮ್ಮ ನಿಲುವು ಸ್ಪಷ್ಟಪಡಿಸಿ: ರಾಜ್ಯ ಸರ್ಕಾರಕ್ಕೆ 'ಹೈ' ಸೂಚನೆ

'ಕಾವೇರಿ ಕಾಲಿಂಗ್' ಅಭಿಯಾನದ ಹೆಸರಿನಲ್ಲಿ ಈಶ ಫೌಂಡೇಷನ್ ಹಮ್ಮಿಕೊಂಡಿರುವ ಯೋಜನೆ ರಾಜ್ಯ ಸರ್ಕಾರದ ಯೋಜನೆಯೋ ಅಥವಾ ಇಲ್ಲವೋ ಎಂಬುದನ್ನು ಇನ್ನೆರಡು ದಿನಗಳಲ್ಲಿ ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ಸೂಚಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: 'ಕಾವೇರಿ ಕಾಲಿಂಗ್' ಅಭಿಯಾನದ ಹೆಸರಿನಲ್ಲಿ ಈಶ ಫೌಂಡೇಷನ್ ಹಮ್ಮಿಕೊಂಡಿರುವ ಯೋಜನೆ ರಾಜ್ಯ ಸರ್ಕಾರದ ಯೋಜನೆಯೋ ಅಥವಾ ಇಲ್ಲವೋ ಎಂಬುದನ್ನು ಇನ್ನೆರಡು ದಿನಗಳಲ್ಲಿ ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ಸೂಚಿಸಿದೆ. 

ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸ್ವಯಂಪ್ರೇರಿತ ಅರ್ಜಿಯಾಗಿ ಪರಿವರ್ತಿಸಿಕೊಂಡಿರುವ ಮುಖ್ಯ ನ್ಯಾಯಮೂರ್ತಿ ಎಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಖಾಸಗಿ ಸಂಸ್ಥೆಯು ಇದೊಂದು ಸರ್ಕಾರಿ ಯೋಜನೆಯೆಂದು ಬಿಂಬಿಸುತ್ತಿದೆ. ಹೀಗಾಗಿ ಸರ್ಕಾರ ಸ್ಪಷ್ಟನೆ ನೀಡಬೇಕೆಂದು ತಿಳಿಸಿದೆ. 

ಸರ್ಕಾರ ಪರ ವಕೀಲರು ಇದು ಸರ್ಕಾರದ ಯೋಜನೆಯಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆದರೂ ಯೋಜನೆಯ ಪ್ರಾಯೋಜಕರು 2011ರಲ್ಲಿ ರಾಜ್ಯ ಸರ್ಕಾರ ಪ್ರಾರಂಭಿಸಿದ್ದ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಗೆ ರೈತರನ್ನು ಸೇರ್ಪಡೆಗೊಳಿಸಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. 

ಅಭಿಯಾನದ ಭಾಗವಾಗಿ ಸಾರ್ವಜನಿಕರಿಂದ ಪ್ರತಿ ಸಸಿಗೆ ರೂ.42 ಸಂಗ್ರಹಿಸಲಾಗುತ್ತಿದ್ದು, ಇದನ್ನು ಪ್ರಶ್ನಿಸಿ ಹಾಗೂ ತಡೆ ನೀಡುವಂತೆ ಕೋರಿ ಅರ್ಜಿದಾರರು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು. 

ಕಾವೇರಿ ಜಲಾನಯನ ಪ್ರದೇಶವನ್ನು ಉಳಿಸಲು 253 ಕೋಟಿ ಸಸಿಗಳನ್ನು ನೆಡಲು ಈಶಾ ಫೌಂಡೇಶನ್ ಯೋಜಿಸಿದ್ದು, ಇದಕ್ಕಾಗಿ ಒಂದು ಸಸಿಗೆ 42 ರೂ ಸಂಗ್ರಹಿಸಿದೆ. ಇದರ ಮೊತ್ತ ರೂ.10,626 ಕೋಟಿಯಾಗಲಿದ್ದು, ಇಷ್ಟೊಂದು ದೊಡ್ಡ ಮೊತ್ತ ಸಂಗ್ರಹವಾಗುತ್ತಿದ್ದರು ಸರ್ಕಾರ ಶಾಂತವಾಗಿರಲು ಸಾಧ್ಯವಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com